DAKSHINA KANNADA
ಬಂಟ್ವಾಳ – ಕಾರಿನ ಮೇಲೆ ಉರುಳಿದ ಬೃಹತ್ ಗಾತ್ರದ ಅಶ್ವಥಮರ – ಓರ್ವನಿಗೆ ಗಾಯ

ಬಂಟ್ವಾಳ ಜೂನ್ 25: ಹಳೆಯ ಅಶ್ವಥ ಮರವೊಂದು ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಕಾರು ಜಖಂಗೊಂಡು ಕಾರಿನಲ್ಲಿದ್ದ ವ್ಯಕ್ತಿಯೊಬ್ಬರಿಗೆ ಗಂಭೀರಗಾಯಗೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪನಡು ಗ್ರಾಮದ ಲಕ್ಷಣ ಕಟ್ಟೆ ಎಂಬಲ್ಲಿ ನಡೆದಿದೆ.
ಕಾರಿನಲ್ಲಿದ್ದ ಲುಕ್ಮಾನ್ ಎಂಬವರಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲುಕ್ಮಾನ್ ಅವರ ಜೊತೆಯಲ್ಲಿ ಇಬ್ಬರು ಸಂಬಂಧಿಕ ಮಹಿಳೆಯರು ಪೇಟೆಗೆ ಹೋಗಿ ವಾಪಾಸು ಮನೆಗೆ ಬರುವ ವೇಳೆ ಈ ಘಟನೆ ನಡೆದಿದೆ. ಕಾರು ನಿಲ್ಲಿಸಿ ಮಹಿಳೆಯರಿಬ್ಬರು ಕಾರಿನಿಂದ ಇಳಿದು ಹೋಗುತ್ತಿದ್ದಂತೆ ಮರ ಉರುಳಿ ಬಿದ್ದಿದ್ದು, ಕಾರಿನೊಳಗಿದ್ದ ಮಾಲಕ ಲುಕ್ಮಾನ್ ಇಳಿಯಬೇಕು ಎನ್ನುವಷ್ಟರಲ್ಲಿ ಘಟನೆ ಸಂಭವಿಸಿದ್ದರಿಂದ ಸಣ್ಣಪುಟ್ಟ ಗಾಯವಾಗಿದೆ.
