Connect with us

    LATEST NEWS

    ಬಪ್ಪನಾಡು ಜಾತ್ರೆ – ಮುಸ್ಲಿಂರಿಗಿಲ್ಲ ವ್ಯಾಪಾರಕ್ಕೆ ಅವಕಾಶ….!!

    ಮಂಗಳೂರು ಎಪ್ರಿಲ್ 08: ಮುಸ್ಲಿಂರೇ ನಿರ್ಮಿಸಿರುವ ಮುಲ್ಕಿ ಬಪ್ಪನಾಡು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ನಿರಾಕರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುರಾತನ ಪ್ರಸಿದ್ಧ 800 ವರ್ಷಗಳ ಇತಿಹಾಸ ಇರುವ ದಕ್ಷಿಣ ಭಾರತದ ಸೌಹಾರ್ದದ ಕೊಂಡಿ ಎಣಿಸಿಕೊಂಡಿರುವ ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮುಸ್ಲಿಮರು ವ್ಯಾಪಾರ ನಡೆಸುವುದಕ್ಕೆ ನಿರ್ಬಂಧ ವಿಧಿಸಿರುವುದಕ್ಕೆ ಸಾರ್ವಜನಿಕ ವಲಯದಿಂದ ಆಕ್ರೋಶ ವ್ಯಕ್ತವಾಗುತ್ತಿದೆ.


    ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಸಭೆಯೊಂದನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಹಿಂದುತ್ವ ಸಂಘಟನೆಗೆ ಸೇರಿದವರೆನ್ನಲಾದ ಕೆಲವರು ದೇವಸ್ಥಾನದ ಆಡಳಿತ ಮೊಕ್ತೇಸರರು ಮತ್ತು ಅನುವಂಶಿಕ ಮೊಕ್ತೇಸರರಿಗೆ ಮನವಿಯೊಂದನ್ನು ಸಲ್ಲಿಸಿದ್ದರು ಎನ್ನಲಾಗಿದೆ.

    ಈ ಮನವಿಯಲ್ಲಿ “ಹಿಂದೂ ಧಾರ್ಮಿಕ ದತ್ತಿ ನಿಯಮ 2002ರಂತೆ ದೇವಸ್ಥಾನದ ಆವರಣದಲ್ಲಿ ಇತರ ಮತೀಯರು ವ್ಯಾಪಾರ ಮಾಡುವಂತಿಲ್ಲ. ಇಲಾಖೆಯ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕುʼ ಎಂದು ಮನವಿಯಲ್ಲಿ ತಿಳಿಸಲಾಗಿತ್ತು. ಈ ಮನವಿಯನ್ನು ಮುಂದಿಟ್ಟುಕೊಂಡು ದಕ್ಷಿಣ ಭಾರತದ ಸೌಹಾರ್ದದ ಕೊಂಡಿ ಎಣಿಸಿಕೊಂಡಿರುವ ಮತ್ತು ಮುಸಲ್ಮಾನರೇ ನಿರ್ಮಿಸಿರುವ ಬಪ್ಪನಾಡು ದೇವಸ್ಥಾನದ ಜಾತ್ರಾಮಹೊತ್ಸವದಲ್ಲಿ ಮುಸ್ಲಿಮರು ವ್ಯಾಪಾರ ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಾರ್ವಜನಿಕ ವಲಯದಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply