LATEST NEWS
ಸಂಪೂರ್ಣ ಬಂದ್ ಆದ ಮಂಗಳೂರು
ಸಂಪೂರ್ಣ ಬಂದ್ ಆದ ಮಂಗಳೂರು
ಮಂಗಳೂರು ಸೆಪ್ಟೆಂಬರ್ 10: ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ವಿರೋಧಿಸಿ ಪ್ರತಿಪಕ್ಷಗಳು, ವಿವಿಧ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ.
ಇಂದು ಬೆಳಿಗ್ಗೆಯಿಂದಲೇ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಖಾಸಗಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದ್ದವು, ಅಲ್ಲದೆ ಕೆಎಸ್ ಆರ್ ಟಿಸಿ ಬಸ್ ಗಳು ಕೂಡ ಸಂಚಾರವನ್ನು ಸ್ಥಗಿತಗೊಳಿಸಿದ್ದರಿಂದ ಜಿಲ್ಲೆಯ ರಸ್ತೆಗಳು ಬಿಕೋ ಅನ್ನುತಿತ್ತು. ನಗರದಲ್ಲಿ ಅತಿ ವಿರಳವಾಗಿ ಆಟೋ ರಿಕ್ಷಾ ಗಳು ಸಂಚರಿಸುತ್ತಿರುವುದು ಕಂಡು ಬಂದಿದೆ. ಭಾರತ್ ಬಂದ್ ಹಿನ್ನೆಲೆ ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಬಂಟ್ವಾಳದ ಕಲ್ಲಡ್ಕದಲ್ಲಿ ರಸ್ತೆ ಮಧ್ಯೆ ಟೈರ್ ಗೆ ಬೆಂಕಿಹಾಕಿ ಸಂಚಾರಕ್ಕೆ ಅಡ್ಡಿಪಡಿಸಲು ಕಿಡಿಗೇಡಿಗಳ ಯತ್ನಿಸಿದ್ದು, ಉರಿಯುತ್ತಿದ್ದ ಟೈರ್ ನ ಬೆಂಕಿಯನ್ನು ಪೊಲೀಸ್ ಸಿಬಂದಿ ನಂದಿಸಿದ್ದಾರೆ.
ಮಂಗಳೂರು ಹೊರವಲಯದ ಕುಲಶೇಖರ ಬಳಿ ಕೂಡಾ ರಸ್ತೆಯಲ್ಲಿ ಟೈರ್ ಗೆ ಬೆಂಕಿ ಇಡಲು ಕೆಲ ಕಿಡಿಗೇಡಿಗಳು ಯತ್ನಿಸಿದ್ದಾರೆ ಎಂದು ವರದಿಯಾಗಿದೆ. ನಗರದಲ್ಲಿ ಬಂದ್ ಹಿನ್ನಲೆಯಲ್ಲಿ ಸಂಚಾರಕ್ಕೆ ಹಾನಿ ಆಗದಂತೆ ದಕ್ಷಿಣ ಕನ್ನಡ ದಲ್ಲಿ ಹೆದ್ದಾರಿ ಉದ್ದಕ್ಕೂ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರ ನಿಗಾವಹಿಸಿದ್ದಾರೆ.