DAKSHINA KANNADA
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ರಾಜ್ಯದ ಕರಾವಳಿ ಸೇರಿ 12 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆ..!

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿ 12 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಂಗಾಳಕೊಲ್ಲಿಯಲ್ಲಿ ಚಂಡ ಮಾರುತ ಪ್ರಭಾವ ಕುಸಿದೆದೆಯಾದ್ರೂ ಅರಬ್ಬೀ ಸುಮುದ್ರದಲ್ಲಿನ ಚಂಡಮಾರುತ ಚುರುಕು ಪಡೆದಿದೆ. ಇದರಿಂದ ಕರಾವಳಿ ಮತ್ತು ಒಳನಾಡಿನಲ್ಲಿ ವಾಯುಭಾರ ಕುಸಿತ ಮುಂದುವರೆದಿದೆ. ಅ.21 ರಿಂದ 22 ರವರೆಗೆ ರಾಜ್ಯದ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗು ಚಿತ್ರದುರ್ಗ ತುಮಕೂರು ಜಿಲ್ಲೆಗಳಿಗೆ ಅ.20 ರಿಂದ 22 ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದ್ದು ಭಾರಿ ಮಳೆ ನಿರೀಕ್ಷಿಸಲಾಗಿದೆ. ಇನ್ನು ಅ.20 ರಂದು ಒಂದೇ ದಿನ ದಕ್ಷಿಣ ಕನ್ನಡ, ಚಿಕ್ಕಾಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.ತುಮಕೂರು, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಬಾಗಲಕೋಟೆ, ಗದಗ, ಕೊಪ್ಪಳ, ಧಾರವಾಡ, ಬೆಳಗಾವಿ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗು ಕರಾವಳಿ, ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
