Connect with us

    UDUPI

    ಬಸವಣ್ಣ ಅವರಿಂದ ಜಗತ್ತಿನ ಮೊದಲ ಸಂಸತ್ತು ರಚನೆ : ಪ್ರಸನ್ನ ಹೆಚ್

    ಉಡುಪಿ, ಏಪ್ರಿಲ್ 23 : ಜಗತ್ತಿನಲ್ಲಿ ಪ್ರಥಮ ಸಂಸತ್ತು ಎಂಬ ಹೆಗ್ಗಳಿಕೆಗೆ ಪಾತ್ರವಾದ ಅನುಭವ ಮಂಟಪವನ್ನು ರಚಿಸುವ ಮೂಲಕ ಸರ್ವ ಜನಾಂಗದ ಶ್ರೇಯಾಭಿವೃದ್ಧಿಗೆ ಸ್ತ್ರೀ-ಪುರುಷರೆಂಬ ತಾರತಮ್ಯವಿಲ್ಲದೆ ಮುಕ್ತ ವಾತಾವರಣವನ್ನು ಕಲ್ಪಿಸಿದ ಬಸವಣ್ಣನವರು ಜಗತ್ತಿನ ಪ್ರಥಮ ಪ್ರಜಾಪ್ರಭುತ್ವಕ್ಕೆ ಮಾದರಿಯಾದವರು ಎಂದು ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹೇಳಿದರು.

    ಅವರು ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಬಸವ ಜಯಂತಿಯಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.

    ತಾವು ಈ ಹಿಂದೆ ಬಸವಕಲ್ಯಾಣದಲ್ಲಿ ಕೆಲಸ ನಿರ್ವಹಿಸಲು ಸಿಕ್ಕ ಅವಕಾಶವನ್ನು ಸ್ಮರಿಸಿಕೊಂಡು, ಬಸವಕಲ್ಯಾಣದಲ್ಲಿ ಇರುವ ಬಸವಣ್ಣ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಸರ್ಕಾರದ ವತಿಯಿಂದ ಬಸವಣ್ಣನವರನ್ನು ಮುಂದಿನ ಪೀಳಿಗೆಗೆ ತಿಳಿಸುವ ಅಭಿವೃದ್ಧಿ ಕೆಲಸಗಳು ಆಗುತ್ತಿವೆಯೆಂದರು. ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ರವರು ಮಾತನಾಡುತ್ತಾ ಬಸವಣ್ಣನವರ ಕಾಯಕ ತತ್ವ ಹಾಗೂ ದಾಸೋಹ ತತ್ವ ಇಂದಿನ ಮಟ್ಟಿಗೆ ತುಂಬಾ ಪ್ರಸ್ತುತ. ಬಸವಣ್ಣನವರ ತತ್ವದಂತೆ ಅಂತರAಗ ಶುದ್ಧರಾಗಿ ಎಲ್ಲರೂ ಕೆಲಸ ನಿರ್ವಹಿಸುವುದರಿಂದ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply