KARNATAKA
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ

ಬೆಂಗಳೂರು ಜುಲೈ 27: ಬಿಎಸ್ ಯಡಿಯೂರಪ್ಪ ಅವರ ನಿರ್ಗಮನದಿಂದ ತೆರವಾಗಿದ್ದ ಸಿಎಂ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.
ಇಂದು ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆಗಾಗಿ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್‌ನಲ್ಲಿ ನಡೆಯುತ್ತಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದ್ದು, ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಹೆಸರನ್ನು ಪ್ರಸ್ತಾಪಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ ಮಗನಾದ ಬಸವರಾಜ ಬೊಮ್ಮಾಯಿ ಜನತಾ ಪರಿವಾರದಿಂದ ರಾಜಕಾರಣ ಆರಂಭಿಸಿ ಬಿಜೆಪಿಗೆ ಬಂದವರು. ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದ ಬೊಮ್ಮಾಯಿ, ಮೂರು ಬಾರಿ ಶಿಗ್ಗಾವಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ.