LATEST NEWS
ಕರ್ನಾಟಕದಲ್ಲಿ ಲವ್ ಜಿಹಾದ್ ಕಾನೂನು ಬಂದೇ ಬರುತ್ತೆ – ಗೃಹ ಸಚಿವ ಬಸವರಾಜ ಬೊಮ್ಮಾಯಿ
ಉಡುಪಿ ಡಿಸೆಂಬರ್ 3: ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ ಎಂದ ಹೇಳಿದ್ದ ಕಾನೂನು ಸಚಿವ ಮಾಧುಸ್ವಾಮಿ ಅವರ ಹೇಳಿಕೆ ಗೃಹಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ತರುವ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ ಎಂದು ತಿಳಿಸಿದ್ದು, ಕರ್ನಾಟಕದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಬಂದೇ ಬರುತ್ತದೆ ಎಂದು ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು ಈಗಾಗಲೇ ಉತ್ತರ ಪ್ರದೇಶ, ಹರಿಯಾಣ, ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಕಾನೂನು ಜಾರಿಗೆ ಚಿಂತನೆ ನಡೆಸಲಾಗಿದೆ. ಅಲ್ಲದೆ ಅಲಹಾಬಾದ್ ಹೈಕೋರ್ಟ್ ಲವ್ ಜಿಹಾದ್ ವಿಚಾರದಲ್ಲಿ ಆದೇಶ ಕೊಟ್ಟಿದ್ದು, ಕರ್ನಾಟಕದಲ್ಲೂ ಸರ್ಕಾರ ಕೂಡ ಈ ಬಗ್ಗೆ ಚಿಂತನೆಯನ್ನು ನಡೆಸಿದೆ ಎಂದರು. ಲವ್ ಜಿಹಾದ್ ಕಾನೂನು ಹೇಗೆ ಜಾರಿಗೆ ತರಬೇಕು ಯಾವ ಅಂಶಗಳನ್ನು ಸೇರಿಸಬೇಕೆಂಬೂದು ಮುಖ್ಯವಾಗಿದ್ದು, ಉತ್ತರಪ್ರದೇಶ ಸರಕಾರ ಹೊರಡಿಸಿರುವ ಅಧಿಸೂಚನೆಯ ಪ್ರತಿಗಳನ್ನು ಪಡೆದುಕೊಳ್ಳಲು ಅಧಿಕಾರಿಗಳಿಗೆ ಹೇಳಿದ್ದೇನೆ, ಇದಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇದನ್ನು ಒಪ್ಪಿದ್ದಾರೆ ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.
Facebook Comments
You may like
-
ಬಂಗಾರ್ ಪಲ್ಕೆಯ ಜಲಪಾತದ ಗುಡ್ಡ ಕುಸಿದು ಓರ್ವ ಮೃತ್ಯು
-
ಕಡಬ ಹೆದ್ದಾರಿಯಲ್ಲಿ ಭೀಕರ ಅಪಘಾತ; ಒಂದು ಬಲಿ..
-
ಮಹಿಳೆಯನ್ನು ಚುಡಾಯಿಸಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತ; ಬಿದ್ದ ಏಟಿಗೆ ಸ್ಥಳದಲ್ಲೆ ಸಾವು
-
ಲಾರಿ ಚಾಲಕನ ಅವಾಂತರ-ಜನಸಾಮಾನ್ಯ ಪ್ರಾಣ ಉಳಿಸಿದ ಕಾಪು ಎಸೈ ರಾಘವೇಂದ್ರ
-
ಪರಿಸರ ಉಳಿಸುವಂತೆ ಹಸಿರು ದಳದಿಂದ ಆರಂಭವಾಗಿದೆ ಜಾಗೃತಿಯ ಆಗ್ರಹ…..
-
ಬಂಟ್ವಾಳ ಚರ್ಚ್ ಕಳ್ಳತನಕ್ಕೆ ಯತ್ನ; ಪವಿತ್ರ ಸೊತ್ತುಗಳಿಗೆ ಹಾನಿ
You must be logged in to post a comment Login