LATEST NEWS
ಬಶೀರ್ ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧನ
ಬಶೀರ್ ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧನ
ಮಂಗಳೂರು ಫೆಬ್ರವರಿ 6: ಬಶೀರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೋಲೀಸರು ಮತ್ತೊರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಶೀರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 6 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು ಇನ್ನೋರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಅಬಿಷೇಕ್ ಆರ್.ಎಸ್ ಎಂದು ಗುರುತಿಸಲಾಗಿದೆ.
ಜನವರಿ 3 ರಂದು ಕೊಟ್ಟಾರ ಚೌಕಿ ಬಳಿ ತನ್ನ ಪಾಸ್ಟ್ ಪುಡ್ ಅಂಗಡಿಯನ್ನು ಬಂದ್ ಮಾಡುತ್ತಿದ್ದ ಸಂದರ್ಭದಲ್ಲಿ ಅಬ್ದುಲ್ ಬಶೀರ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾಡಿದ್ದರು. ನಂತರ ಬಶೀರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಬಶೀರ್ ಮೃತಪಟ್ಟಿದ್ದರು.
You must be logged in to post a comment Login