LATEST NEWS
ಸಹಕೈದಿಗಳಿಂದ ಹಲ್ಲೆ ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳ ಸ್ಥಳಾಂತರ

ಮಂಗಳೂರು ಸೆಪ್ಟೆಂಬರ್ 15: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಮಂಗಳೂರು ಕಾರಾಗೃಹದಿಂದ ಶಿವಮೊಗ್ಗ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.
ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಅವರ ಪುತ್ರ ನವನೀತ ಶೆಟ್ಟಿ, ಪತ್ನಿ ರಾಜೇಶ್ವರಿ ಶೆಟ್ಟಿ ಹಾಗೂ ಜ್ಯೋತಿಷಿ ನಿರಂಜನ್ ಭಟ್ ಅವರನ್ನು ಭದ್ರತಾ ಕಾರಣಗಳಿಗಾಗಿ ಶಿವಮೊಗ್ಗ ಜೈಲಿಗೆ ಸ್ಥಳಾಂತರಿಸಲಾಗಿದೆ.

ಮಂಗಳೂರು ಜೈಲಿನಲ್ಲಿ ನಡೆದ ಮಾರಣಾಂತಿಕ ಹಲ್ಲೆ
ಕಳೆದ ಸೋಮವಾರ ಮಂಗಳೂರು ಕಾರಾಗ್ರಹದಲ್ಲಿ ಬಿಜಿಲಕೇರಿ ಧನರಾಜ್ ಮತ್ತು ತಂಡ ನವನೀತ ಶೆಟ್ಟಿ ಹಾಗೂ ಜ್ಯೋತಿಷಿ ನಿರಂಜನ್ ಭಟ್ ಅವರ ಮೇಲೆ ಮಾರಣಾಂತಿಕ ದಾಳಿ ನಡೆಸಿತ್ತು .
ಈ ಘಟನೆಯಲ್ಲಿ ನವನೀತ್ ಶೆಟ್ಟಿ ಹಾಗೂ ನಿರಂಜನ ಭಟ್ ಗಾಯಗೊಂಡಿದ್ದರು. ಅವರಿಗೆ ನಗರದ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು .
ಕಾರಾಗ್ರಹದಲ್ಲಿ ಸಹಕೈದಿಗಳಿಂದ ಹಲ್ಲೆ ನಡೆದಿರುವ ಹಿನ್ನೆಲೆಯಲ್ಲಿ ಈ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಶಿವಮೊಗ್ಗ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.