Connect with us

    LATEST NEWS

    ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ – ಹೋಮಕುಂಡದಲ್ಲಿ ಸುಟ್ಟಿದ್ದ ಪತ್ನಿ,ಪುತ್ರ ಸಹಿತ  ಮೂರು ಆರೋಪಿಗಳು ದೋಷಿ

    ಉಡುಪಿ ಜೂನ್ 8: ಇಡೀ ರಾಜ್ಯವನ್ನೆ ಬೆಚ್ಚಿ ಬಿಳಿಸಿದ್ದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರಮುಖ ಆರೋಪಿಗಳು ದೋಷಿ ಎಂದು ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟ ಮಾಡಿದೆ.


    ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟಿರುವ ಆರೋಪ ಸಾಬೀತಾಗಿದ್ದು, ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರಮುಖ ಆರೋಪಿಗಳು ದೋಷಿ ಎಂದು ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟ ಮಾಡಿದೆ. ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟಿರುವ ಆರೋಪ ಸಾಬೀತಾಗಿದ್ದು, ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಗೆಳೆಯ ನಿರಂಜನ ಭಟ್ ಗೆ ಶಿಕ್ಷೆ ವಿಧಿಸಲಾಗಿದೆ. ಐದನೇ ಆರೋಪಿ ಚಾಲಕ ರಾಘವೇಂದ್ರ ಖುಲಾಸೆಗೊಂಡಿದ್ದು, ನಾಲ್ಕನೇ ಆರೋಪಿ ನಿರಂಜನ್ ಭಟ್ ತಂದೆ ಶ್ರೀನಿವಾಸ್ ಭಟ್ ಅನಾರೋಗ್ಯದಿಂದ ಮೃತಪಟ್ಟಿದ್ದರು.


    ಆರೋಪಿಗಳು 2016ರ ಜುಲೈ 28ರಂದು ಅಪರಾಹ್ನ 3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ ಕುಂಡದಲ್ಲಿ ಹಾಕಿ ಸುಟ್ಟಿದ್ದರು. ಜುಲೈ 31ರಂದು ಭಾಸ್ಕರ್ ಶೆಟ್ಟಿ ತಾಯಿ ತನ್ನ ಮಗ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರಿಗೆ ಈ ಕೊಲೆ ಬೆಳಕಿಗೆ ಬಂತು. ಆಗಸ್ಟ್ 7ರಂದು ಪತ್ನಿ ರಾಜೇಶ್ವರಿ ಹಾಗೂ ಮಗ ನವನೀತ್ ನನ್ನು ಮತ್ತು ಆಗಸ್ಟ್ 8ರಂದು ನಿರಂಜನ್ ಭಟ್ ನನ್ನು ಪೊಲೀಸರು ಬಂಧಿಸಿದ್ದರು.


    ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತಾರಾಮ್‌ ಶೆಟ್ಟಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. 78 ಸಾಕ್ಷಿಗಳ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ.
    ಪ್ರಕರಣದ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಹಾಗೂ ಮತ್ತೊಬ್ಬ ಆರೋಪಿ ರಾಘವೇಂದ್ರಗೆ ಜಾಮೀನು ದೊರೆತಿದೆ. ಪುತ್ರ ನವನೀತ್ ಶೆಟ್ಟಿ, ನಂದಳಿಕೆಯ ನಿರಂಜನ್ ಭಟ್‌ ಜೈಲಿನಲ್ಲಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *