LATEST NEWS
ರಾಷ್ಟ್ರೀಯ ಹೆದ್ದಾರಿಯಲ್ಲಿ ಈಜುಕೊಳ ನಿರ್ಮಾಣ – ಸಚಿವ ಕೋಟ ಕಾರು ತಡೆದು ಆಕ್ರೋಶ
ಉಡುಪಿ ಅಗಸ್ಟ್ 8: ಈಜುಕೊಳದಂತಾಗಿರುವ ರಾಷ್ಟ್ರೀಯ ಹೆದ್ದಾರಿ 66 ರ ಅದ್ವಾನಕ್ಕೆ ಆಕ್ರೋಶಕ್ಕೆಗೊಂಡ ಸಾರ್ವಜನಿಕರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕಾರನ್ನು ತಡೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.
ನವಯುಗ ಕಂಪೆನಿಯ ಅವೈಜ್ಞನಿಕ ಕಾಮಗಾರಿಯಿಂದಾಗಿ ಕುಂದಾಪುರದ ಬಸ್ರೂರು ಮೂರು ಕೈ- ಟಿಟಿ ರಸ್ತೆ ಜಂಕ್ಷನ್‌ವರೆಗೆ ರಾಷ್ಡ್ರೀಯ ಹೆದ್ದಾರಿಯಲ್ಲಿ ನೀರು ನಿಂತು ಸವಾರರು ಸಂಚರಿಸಲು ಹರಸಾಹಸ ಪಡಬೇಕಾದ ಪರಿಸ್ಥಿತಿ ಬಂದೊದಗಿದ್ದು, ರಸ್ತೆ ಈಜುಕೊಳದಂತಾಗಿದೆ. ಬಸ್ ಹಾಗೂ ಇತರೆ ವಾಹನಗಳಲ್ಲಿ ಸಂಚರಿಸುವ ಜನರಿಗೆ ಸಮಸ್ಯೆ ಉಂಟಾಗಿದ್ದು, ಹೆದ್ದಾರಿ ಹೋರಾಟ ಸಮಿತಿ, ರಿಕ್ಷಾ ಚಾಲಕರು, ಸ್ಥಳೀಯರ ಆಕ್ರೋಶ ನವಯುವಗ ಕಂಪೆನಿಯ ಅವೈಜ್ಞಾನಿಕ ಕಾಮಗಾರಿಗೆ ಆಕ್ರೋಶ ವ್ಯಕ್ತಪಡಿಸಿದ್ದರು.
ಇಂದು ಕುಂದಾಪುರದಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿ ವಾಪಾಸಾಗುತ್ತಿದ್ದ ಸಚಿವ ಕೋಟ ಶ್ರೀನಿವಾಸ ಪೂಜಾರಿಯ ಕಾರು ಬಸ್ರೂರು ಮೂರು ಕೈ ಸಮೀಪ ಬಂದಾಗ ಕುಂದಾಪುರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಹಾಗೂ ಸ್ಥಳೀಯರು ತಡೆದು, ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಒತ್ತಾಯಿಸಿದರು. ಈ ವೇಳೆ ಸಚಿವರು ಸಕರಾತ್ಮಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಹೋರಾಟ ಸಮಿತಿ ಪದಾಧಿಕಾರಿಗಳು ಹಾಗೂ ಸಚಿವರ ಮಧ್ಯೆ ವಾಗ್ವಾದ ಕೂಡ ನಡೆಯಿತು.
ಬಳಿಕ ಡಿಸಿಗೆ ಕರೆ ಮಾಡಿ ಮಾತನಾಡಿದ ಸಚಿವರು ಈ ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಸೂಚಿಸಿದರು. ಡಿಸಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಂಬಂಧಪಟ್ಟವರಿಗೆ ಮಾತನಾಡಿ ಸಮಸ್ಯೆ ಬಗೆಹರಿಸಲು ತಿಳಿಸಿದ್ದೇನೆ ಎಂದರು.
ಉಸ್ತುವಾರಿ ಸಚಿವರು, ಸಂಸದೆ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಯಾವುದೇ ತಲೆಕೆಡಿಸಿಕೊಳ್ಳದ ಹಿನ್ನಲೆ ಜಿಲ್ಲೆಯ ಜನರು ಮಳೆಗಾಲದಲ್ಲಿ ಸಂಕಷ್ಟಪಡುವಂತಾಗಿದೆ.