LATEST NEWS
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು
ಕೊಲ್ಕತ್ತಾ, ಜನವರಿ 27 : ಈಗಾಗಲೇ ಎದೆನೋವು ಕಾಣಿಸಿಕೊಂಡು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಬಳಿಕ, ಗುಣಮುಖರಾಗಿ ಆಸ್ಪತ್ರೆಯಿಂದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ, ಇದೀಗ ಮತ್ತೆ ಎದೆನೋವು ಕಾಣಿಸಿಕೊಂಡಿದ್ದರಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
#BREAKING @BCCI president @SGanguly99 being taken to a private hospital in Kolkata after he complained of chest pain today morning, says sources in his family. Recently he was hospitalised following a mild heart attack. @DeccanHerald
— Soumya Das (@Soumyareporting) January 27, 2021
ಈ ಕುರಿತಂತೆ ಸೌಮ್ಯ ದಾಸ್ ಎಂಬುದವರು ಟ್ವಿಟ್ ಮಾಡಿದ್ದು, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದಾಗಿ ಅವರನ್ನು ಕೊಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಅವರ ಕುಟುಂಬದ ಮೂಲಗಳು ತಿಳಿಸಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.