LATEST NEWS
ಬಜರಂಗದಳ ಮುಖಂಡ ಹರೀಶ್ ಶೆಟ್ಟಿ ಹಲ್ಲೆ ಪ್ರಕರಣದ ಪ್ರಮುಖ ಆರೋಪಿಗಳ ಬಂಧನ

ಬಜರಂಗದಳ ಮುಖಂಡ ಹರೀಶ್ ಶೆಟ್ಟಿ ಹಲ್ಲೆ ಪ್ರಕರಣದ ಪ್ರಮುಖ ಆರೋಪಿಗಳ ಬಂಧನ
ಮಂಗಳೂರು ಅಕ್ಟೋಬರ್ 3: ಬಜರಂಗದಳ ಮುಖಂಡ ಹರಿಶ್ ಶೆಟ್ಟಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮೂರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಬಂಟ್ವಾಳ ನಿವಾಸಿ ಮೊಹಮ್ಮದ್ ಶರೀಫ್, ಬಜಪೆ ನಿವಾಸಿಗಳಾದ ಶಿಫಾಜ್, ಮೊಹಮ್ಮದ್ ಆರಿಫ್ ಎಂದು ಗುರುತಿಸಲಾಗಿದೆ.
ಕಳೆದ ಸೆಪ್ಟೆಂಬರ್ 24 ರಂದು ಬಜರಂಗದಳದ ಮುಖಂಡ ಹರೀಶ್ ಶೆಟ್ಟಿ ಕೈಕಂಬದಿಂದ ಕೆಲಸ ಮುಗಿಸಿ ರಾತ್ರಿ ಮನೆಗೆ ತೆರಳುತ್ತಿದ್ದ ಸಂದರ್ಭದ ಆರೋಪಿಗಳು ಸೂರಲ್ಪಾಡಿ ಎಂಬಲ್ಲಿ ಹರೀಶ್ ಶೆಟ್ಟಿ ಅವರ ಬೈಕ್ ಗೆ ಡಿಕ್ಕಿ ಹೊಡೆದು ಮಾರಕಾಯುಧಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದರು.

ಈ ಕುರಿತಂತೆ ಹಲ್ಲೆ ಪ್ರಕರಣ ದಾಖಲಾಗಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಪ್ರಕರಣದ ಪತ್ತೆಗೆ ಮೂರು ತಂಡಗಳನ್ನು ರಚಿಸಿದ್ದರು. ಜಿಲ್ಲೆಯಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದ ಈ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಬಂಧಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ. ಬಂಧಿತರಿಂದ ಹಲ್ಲೆ ಪ್ರಕರಣಕ್ಕೆ ಬಳಸಿ ಬೈಕ್ ನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಬಂಧಿತರು ಈ ಮೊದಲು ಯಾವುದೇ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಪೊಲೀಸರಿಗೆ ಇನ್ನೂ ಮಾಹಿತಿ ದೊರೆತಿಲ್ಲ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.