Connect with us

    LATEST NEWS

    ಉಡುಪಿಯಲ್ಲಿ ಕುಡಿಯುವ ನೀರು ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ-ಎಂ. ಮಹೇಶ್ವರ ರಾವ್

    ಉಡುಪಿಯಲ್ಲಿ ಕುಡಿಯುವ ನೀರು ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ-ಎಂ. ಮಹೇಶ್ವರ ರಾವ್

    ಉಡುಪಿ, ಫೆಬ್ರವರಿ 26: ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಈಗಿನಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಸೂಚಿಸಿದ್ದಾರೆ.
    ಅವರು ಬುಧವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

    ಕಳೆದ ಬಾರಿ ಬೇಸಿಗೆಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ತಲೆದೋರಿದ ನೀರಿನ ಸಮಸ್ಯೆ ಕುರಿತು ಪ್ರಸ್ತಾಪಿಸಿದ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್, ಈ ಬಾರಿ ಮೇ ಅಂತ್ಯದವರೆಗೂ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಉಡುಪಿ ನಗರಸಭೆಯ ಪೌರಾಯುಕ್ತರಿಗೆ ಸೂಚಿಸಿದ ಅವರು, ನೀರಿನ ಕಡಿತಗೊಳಿಸುವ ನಿರ್ಣಯ ಕೈಗೊಳ್ಳುವ ಮೊದಲು ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿ, ಸಾರ್ವಜನಿಕರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ, ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯ ತತ್ಪರರಾಗಿ ಎಂದು ತಿಳಿಸಿದರು.

    ಬೇಸಿಗೆ ಸಮಯದಲ್ಲಿ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಟ್ಯಾಂಕರ್ ಮೂಲಕ ನೀರು ವಿತರಿಸುವ ಕುರಿತಂತೆ ಆಪ್ ಅಭಿವೃದ್ದಿಪಡಿಸಲಾಗಿದ್ದು, ಇದರ ಪ್ರಾಯೋಗಿಕ ಬಳಕೆಯ ಕುರಿತು ಎಲ್ಲಾ ತಹಸೀಲ್ದಾರ್ ಗಳಿಗೆ ತರಬೇತಿಯನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು.

    ಕುಡಿಯುವ ನೀರಿನ ಸಮಸ್ಯೆಗಳಿಗೆ ಸ್ಪಂದಿಸಲು ಕಾಲ್ ಸೆಂಟರ್ ತೆರಯುವಂತೆ ತಿಳಿಸಿದ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್, ನದಿ ದಂಡೆಯಲ್ಲಿನ ರೈತರಿಗೆ ನದಿಯ ನೀರು ಬಳಸುವುದರ ಬದಲು ಹನಿ ನೀರಾವರಿ ಪದ್ದತಿ ಅಳವಡಿಸಿಕೊಳ್ಳುವ ಕುರಿತಂತೆ, ಕೃಷಿ ಮತ್ತು ತೋಟಗಾರಿಕಾ ಇಲಾಖೆಗಳ ಅಧಿಕಾರಿಗಳು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ರೈತರ ಸಭೆ ನಡೆಸಿ, ಅವರ ಮನವೊಲಿಸುವಂತೆ ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply