Connect with us

    LATEST NEWS

    ಕಡಲ ತೀರಕ್ಕೆ ವಿಹಾರಕ್ಕೆ ಬಂದಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ – ಆರು ಮಂದಿ ವಶಕ್ಕೆ

    ಕಡಲ ತೀರಕ್ಕೆ ವಿಹಾರಕ್ಕೆ ಬಂದಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ – ಆರು ಮಂದಿ ವಶಕ್ಕೆ

    ಮಂಗಳೂರು ನವೆಂಬರ್ 26: ಕಡಲ ತೀರಕ್ಕೆ ವಿಹಾರಕ್ಕಾಗಿ ಬಂದಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಮಂಗಳೂರು ನಗರ ಹೊರವಲಯದ ತೋಟ ಬೆಂಗ್ರೆ ಬೀಚ್ ಬಳಿ ನಡೆದಿದೆ.

    ನವೆಂಬರ್ 18ರಂದು ಈ ಘಟನೆ ನಡೆದಿದ್ದು, ಯುವತಿ ನೀಡಿದ ದೂರಿನ ಮೇಲೆ ಇಂದು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ದೂರಿನ ಹಿನ್ನೆಲೆಯಲ್ಲಿ ಕಾರ್ಯಚರಿಸಿದ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಮಂಗಳೂರಿನ ತೋಟ ಬೆಂಗ್ರೆ ಕಡಲ ತೀರಕ್ಕೆ ವಿಹಾರಕ್ಕಾಗಿ ಬಂದಿದ್ದ ಬಂಟ್ವಾಳ ಮೂಲದ ಯುವಜೋಡಿ ಮೇಲೆ ಏಳು ಮಂದಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಯುವತಿಯನ್ನು ಸಾಮೂಹಿಕ ಅತ್ಯಾಚಾರಗೈದಿದ್ದಾರೆ ಎಂದು ಆರೋಪಿಸಲಾಗಿದೆ. ವಾರದ ಹಿಂದೆ ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply