Connect with us

LATEST NEWS

ಬ್ಯಾರಿ ಸಾಹಿತ್ಯ ಅಕಾಡೆಮಿ ಕಟ್ಟಡ ನಿರ್ಮಾಣಕ್ಕೆ ಬಿಜೆಪಿ ಕಾರ್ಯಕರ್ತರಿಂದ ವಿರೋಧ….!!

ಮಂಗಳೂರು ಫೆಬ್ರವರಿ 26: ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ.ಅಬ್ಬಕ್ಕ ಭವನದ ವಿಳಂಬ ಹಿನ್ನಲೆ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಅಭಿಮಾನಿಗಳು ಪ್ರತಿಭಟನೆ ನಡೆಸಿದರುಯ


ತೊಕ್ಕೊಟ್ಟು ಜಂಕ್ಷನ್ ಬಳಿ ನಿರ್ಮಿಸಲು ಉದ್ದೇಶಿಸಿರುವ ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಜಮಾಯಿಸಿದ ಬಿಜೆಪಿ ಬೆಂಬಲಿಗರು, ಸಂಘ ಪರಿವಾರದ ಕಾರ್ಯಕರ್ತರು ಹಾಗೂ ಉಳ್ಳಾಲ ಕೌನ್ಸಿಲರ್ ದಿನಕರ ಉಳ್ಳಾಲ ನೇತೃತ್ವದ ಅಬ್ಬಕ್ಕ ಉತ್ಸವ ಸಮಿತಿಯವರು ಪ್ರತಿಭಟನೆ ನಡೆಸಿದರು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕ, ಪ್ರತಿಪಕ್ಷದ ಉಪನಾಯಕ ಯು.ಟಿ.ಖಾದರ್ ಅವರಿಗೆ ಕಾರ್ಯಕ್ರಮಕ್ಕೆ ತೆರಳದಂತೆ ಪ್ರತಿಭಟನಕಾರರು ಮನವಿ ಮಾಡಿದರು. ಇದೊಂದು ಸರ್ಕಾರಿ ಕಾರ್ಯಕ್ರಮವಾದ ಕಾರಣ ಹಾಜರಾಗುವುದು ಅನಿವಾರ್ಯ ಎಂದ ಖಾದರ್ ಬಳಿಕ ನಡೆದ ಶಿಲಾನ್ಯಾಸ ನಡೆದ ಕಾರ್ಯಕ್ರಮದಲ್ಲಿ‌ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಶಾಸಕರು ಹಾಗೂ ಪ್ರತಿಭಟನನಕಾರರ ನಡುವೆ ತೀವ್ರ ವಾಗ್ವಾದ ನಡೆಯಿತು. ಬಿಜೆಪಿ ಸರ್ಕಾರವೇ ಇರುವಾಗ, ಬಿಜೆಪಿ ಕಾರ್ಯಕರ್ತರೇ ಸೇರಿಕೊಂಡು ಪ್ರತಿಭಟಿಸುತ್ತಿರುವುದು ಹಾಸ್ಯಾಸ್ಪದ ಎಂದು ಖಾದರ್ ಹೇಳಿದರು.
ಪ್ರತಿಭಟಿಸುವ ಬದಲು, ತಮ್ಮ ಸರ್ಕಾರದ ಮೂಲಕ ಯೋಜನೆಯನ್ನು ನಿಲ್ಲಿಸಬಹುದಲ್ಲಾ ಶಾಸಕ ಯು.ಟಿ ಖಾದರ್ ಪ್ರಶ್ನಿಸಿದರು.

Advertisement
Click to comment

You must be logged in to post a comment Login

Leave a Reply