KARNATAKA
ಬೆಡ್ ಬ್ಲಾಕಿಂಗ್ ಪ್ರಕರಣ : ಅಮಾನತುಗೊಂಡಿದ್ದ 17 ಮುಸ್ಲಿಂ ನೌಕರರ ಮರು ನೇಮಕ
ಬೆಂಗಳೂರು, ಮೇ 10: ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣ ಸಂಬಂಧ ಅಮಾನತುಗೊಂಡಿದ್ದ 17 ಮುಸ್ಲಿಂ ನೌಕರರನ್ನು ಮರು ನೇಮಕ ಮಾಡಿಕೊಳ್ಳಲಾಗಿದೆ. ಇಂದಿನಿಂದಲೇ ಈ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.
ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ಶಾಸಕರು ಬೆಡ್ ಬ್ಲಾಕಿಂಗ್ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ 17 ಮುಸ್ಲಿಂ ನೌಕರರನ್ನು ಅಮಾನತು ಮಾಡಲಾಗಿತ್ತು. ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ನೌಕರರು ಬಾಗಿಯಾಗಿಲ್ಲ. ಅವರನ್ನು ಮರು ನೇಮಕ ಮಾಡಿಕೊಳ್ಳಬೇಕೆಂದು ಕ್ರಿಸ್ಟಲ್ ಇನ್ಫೋ ಸೀಸ್ಟಮ್ಸ್ ಅಂಡ್ ಸರ್ವಿಸಸ್ ಸಂಸ್ಥೆ ಅಧಿಕಾರಿಗಲು ಮನವಿ ಮಾಡಿದ್ದರು.
ಸಂಸ್ಥೆಯ ಅಧಿಕಾರಿಗಳು ಮನವಿ ಮಾಡಿದ ಹಿನ್ನೆಲೆಯಲ್ಲಿ ದಕ್ಷಿಣ ವಲಯ ಉಸ್ತುವಾರಿ ಐಎಎಸ್ ಅಧಿಕಾರಿ ತುಳಸಿ ಮದ್ದಿನೇನಿ ಅವರು ಅಮಾನತು ರದ್ದು ಮಾಡಿ ಮತ್ತೆ ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.
You must be logged in to post a comment Login