BANTWAL
ಹೆಜ್ಜೇನು ದಾಳಿಗೆ 12 ವರ್ಷದ ಬಾಲಕ ಬಲಿ….!!
ಬಂಟ್ವಾಳ ಸೆಪ್ಟೆಂಬರ್ 2: ಹೆಜ್ಜೇನು ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ಕಳಾಯಿಯಲ್ಲಿ ನಡೆದಿದೆ.
ಮೃತ ಬಾಲಕನನ್ನು ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (12) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 1 ರ ಗುರುವಾರ ಸಂಜೆ ಮನೆಯ ಬಳಿ ಆಟವಾಡುತ್ತಿದ್ದ ಮಾಝಿನ್ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ತೀವ್ರ ಅಸ್ವಸ್ಥಗೊಂಡ ಬಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
You must be logged in to post a comment Login