LATEST NEWS
ಮಣೂರು – ಹೆಜ್ಜೇನು ದಾಳಿ ಐವರಿಗೆ ಗಂಭೀರ ಗಾಯ
ಕೋಟ ನವೆಂಬರ್ 26: ಹೆಜ್ಜೇನು ದಾಳಿಗೆ ಕೆಲಸ ಮಾಡುತ್ತಿದ್ದ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಣೂರಿನಲ್ಲಿ ನಡೆದಿದೆ.
ಹೆಜ್ಜೇನು ದಾಳಿಗೊಳಗಾದ ಕಲ್ಲು ಕೆಲಸದ ಮೇಸ್ತ್ರಿ ಹಾಜಿ ಇಬ್ರಾಹಿಂ ಪಾರಂಪಳ್ಳಿ, ಕಾರ್ಮಿಕರಾದ ಮೊಹಮ್ಮದ್ ಪಾರಂಪಳ್ಳಿ, ಪ್ರಭಾಕರ, ಶೇಖರ್ ಪೂಜಾರಿ ಎಂದು ಗುರುತಿಸಲಾಗಿದೆ. ಕೋಟ ಮಣೂರಿನಲ್ಲಿ ಕಾಂಪೌಂಡ್ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ಹಿಂಡೊಂದು ಏಕಾಏಕಿ ದಾಳಿ ನಡೆಸಿದೆ. ಈ ಜೇನು ನೊಣಗಳ ಕಡಿತದಿಂದ ತಪ್ಪಿಸಿಕೊಂಡು ಐವರು ರಸ್ತೆಗೆ ಓಡಿ ಬಂದಿದ್ದರಿಂದ ಪ್ರಾಣಪಾಯದಿಂದ ಪಾರಾಗಿದ್ದಾರೆ. ಗಂಭೀರ ಗಾಯಗೊಂಡವರನ್ನು ತಕ್ಷಣ ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ