Connect with us

    KARNATAKA

    ಸೆ.1ರಿಂದ ದ್ವಿತೀಯ ಪಿಯು ಕಾಲೇಜು ಆರಂಭ – ಜಿಲ್ಲಾಧಿಕಾರಿಯಿಂದ ಮಾರ್ಗಸೂಚಿ ಬಿಡುಗಡೆ

    ಮಂಗಳೂರು, ಅಗಸ್ಟ್, 29: ದ.ಕ ಜಿಲ್ಲೆಯಲ್ಲಿ ಸೆ.1ರಿಂದ ದ್ವಿತೀಯ ಪಿಯು ಕಾಲೇಜುಗಳನ್ನು ಪುನರಾರಂಭಿಸಲು ದ. ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪೂರ್ವಾನುಮತಿಯೊಂದಿಗೆ ಪ್ರಥಮ ಪಿಯುಸಿ ಹಾಗೂ ಕಾಲೇಜು ಜಂಟಿ ನಿರ್ದೇಶಕ ಪೂರ್ವಾನುಮತಿ ಪಡೆದು ಪದವಿ ಹಾಗೂ ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಸೆ.15ರ ಬಳಿಕ ಆರಂಭಿಸಬಹುದು ಎಂದು ಆದೇಶಿಸಿದ್ದಾರೆ.

    ಪ್ರಮಾಣಿತ ಕಾರ್ಯಾಚರಣಾ ಪ್ರಕ್ರಿಯೆ (ಎಸ್‌ಒಪಿ) ಅನ್ನು ಅನುಷ್ಠಾನಗೊಳಿಸುವ ಸಂಪೂರ್ಣ ಜವಾಬ್ದಾರಿಯನ್ನು ಆಯಾ ಕಾಲೇಜಿನ ಪ್ರಾಂಶುಪಾಲರು ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ. ಕೇರಳದಿಂದ ಬರುವ ವಿದ್ಯಾರ್ಥಿಗಳನ್ನು ಏಳು ದಿನಗಳ ಕಾಲ ಕ್ವಾರಂಟೈನ್‌‌‌‌‌ನಲ್ಲಿ ಇರಿಸಲು ಕಾಲೇಜುಗಳಲ್ಲಿ ಪ್ರತ್ಯೇಕವಾದ ಕೊರೊನಾ ಸೆಂಟರ್‌ಗಳನ್ನು ತೆರೆಯಬೇಕು. ಏಳು ದಿನಗಳ ಕ್ವಾರಂಟೈನ್‌‌‌‌ ಮುಗಿಸಿದ ವಿದ್ಯಾರ್ಥಿಗಳು ಆರ್‌ಟಿಪಿಸಿಆರ್‌‌‌ ಪರೀಕ್ಷೆ ಮಾಡಿಸಿ ನೆಗೆಟಿವ್‌ ಪ್ರಮಾಣಪತ್ರದೊಂದಿಗೆ ತರಗತಿಗಳಿಗೆ ಹಾಜರಾಗಬಹುದು. ಕ್ವಾರಂಟೈನ್‌‌‌ನಲ್ಲಿರುವ ವಿದ್ಯಾರ್ಥಿಗಳಿಗೆ ಆನ್‌ ಲೈನ್‌‌‌‌‌‌ ತರಗತಿಗಳಿಗೆ ಹಾಜರಾಗಲು ವ್ಯವಸ್ಥೆ ಮಾಡಬೇಕು ಎಂದಿದ್ದಾರೆ.

    ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗವು ಆರ್‌ಟಿಪಿಸಿಆರ್‌‌‌ ಪರೀಕ್ಷೆ ಮಾಡಿಸಿ ನೆಗೆಟಿವ್‌ ಪ್ರಮಾಣಪತ್ರ ನೀಡಬೇಕು. ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಗತಿಗಳನ್ನು ನಡೆಸಬೇಕು. ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳು ಏಳು ದಿನಗಳಿಗೊಮ್ಮೆ ಆರ್‌ಟಿಪಿಸಿಆರ್‌‌‌ ಪರೀಕ್ಷೆ ಮಾಡಿಸಿ ನೆಗೆಟಿವ್‌ ಪ್ರಮಾಣಪತ್ರದೊಂದಿಗೆ ತರಗತಿಗಳಿಗೆ ಹಾಜರಾಗಬಹುದು. ಕೇರಳದಿಂದ ಆಗಮಿಸುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಎರಡು ಡೋಸ್‌ ಲಸಿಕೆ ಪಡೆದಿದ್ದರೂ ಕೂಡಾ ಪ್ರತಿ ತಿಂಗಳಿಗೊಮ್ಮೆ ಆರ್‌ಟಿಪಿಸಿಆರ್‌‌ ಪರೀಕ್ಷೆ ಮಾಡಿಸಿ ನೆಗೆಟಿವ್‌‌ ಪ್ರಮಾಣಪತ್ರದೊಂದಿಗೆ ಹಾಜರಾಗಬಹುದು ಎಂದಿದ್ದಾರೆ.

    ಎಸ್‌‌ಒಪಿಯನ್ನು ಅನುಸರಿಸುತ್ತಿರುವ ಬಗ್ಗೆ ಪರಿಶೀಲನೆ ನಡೆಸಲು ಡಿಡಿಪಿಯು, ತಾಲೂಕು ಆರೋಗ್ಯಧಿಕಾರಿಗಳು ಹಾಗೂ ಆಯಾ ಕಾಲೇಜುಗಳ ಪ್ರಾಂಶುಪಾಲರನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ. ಈಗಾಗಲೇ ವೈದ್ಯಕೀಯ ಪ್ಯಾರಾ ಮೆಡಿಕಲ್‌ ನರ್ಸಿಂಗ್‌ ಕಾಲೇಜಿಗೆ ಸಂಬಂಧಿಸಿದಂತೆ ನೀಡಿರುವ ನಿರ್ದೇಶನದ ಪ್ರಕಾರ, ಪ್ರತ್ಯೇಕ ಕೊರೊನಾ ಕೇರ್‌ ಸೆಂಟರ್‌‌ ತೆರೆದು ಒಂದು ವಾರ ಕ್ವಾರಂಟೈನ್‌‌ ಹಾಗೂ ಸೋಂಕಿತ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲು ಕ್ರಮ ತೆಗೆದುಕೊಳ್ಳಬೇಕು, ಒಂದು ವಾರದ ಬಳಿಕ ಮತ್ತೊಮ್ಮೆ ಆರ್‌ಟಿಪಿಸಿಆರ್‌‌‌ ಪರೀಕ್ಷೆ ನಡೆಸಿ ನೆಗೆಟಿವ್‌ ವರದಿ ಬಂದರೆ ಮಾತ್ರವೇ ಭೌತಿಕ ತರಗತಿಗಳನ್ನು ನಡೆಸಲು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply