Connect with us

    KARNATAKA

    ಬೆಳಗಾವಿ – ನಾಲೆಗೆ ಬಿದ್ದ ಕ್ರೂಸರ್ 9 ಮಂದಿ ಸಾವು

    ಬೆಳಗಾವಿ ಜೂನ್ 26: ಬೆಳಗಾವಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನಪ್ಪಿರುವ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿ ನಾಲೆಗೆ ಬಿದ್ದ ಪರಿಣಾಮ ಈ ಘಟನೆ ನಡೆದಿದೆ.


    ಮೃತರನ್ನು ಅಡಿಯಪ್ಪ ಚಿಲಭಾವಿ, ಬಸವರಾಜ್ ದಳವಿ, ಬಸವರಾಜ್ ಹನುಮನ್ನವರ್, ಆಕಾಶ್ ರಾಮಣ್ಣ ಗತ್ತಿ, ಫಕಿರಪ್ಪ ಹರಿಜನ, ಮಲಪ್ಪ ಸೇರಿ 9 ಮಂದಿ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಗೋಕಾಕ್ ತಾಲೂಕಿನ ದಾಸನಟ್ಟಿ, ಅಕ್ಕತಂಗೇರಹಾಳ, ಎಂ ಮಲ್ಲಾಪುರ ನಿವಾಸಿಗಳು, ಕೂಲಿ ಕೆಲಸಕ್ಕೆ ಕ್ರೂಸರ್ ನಲ್ಲಿ ಹೊರಟಿದ್ದ ಇವರು ಚಾಲಕನ ನಿಯಂತ್ರಣ ತಪ್ಪಿ ಬೆಳಗಾವಿ ತಾಲೂಕಿನ ಕಲ್ಯಾಳ ಬ್ರಿಡ್ಜ್ ಬಳಿ ಪಲ್ಟಿಯಾಗಿ ನಾಲೆಗೆ ಬಿದ್ದಿದೆ.


    ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಇಂದು ನಸುಕಿನ ಜಾವ ನಡೆದಿರುವ ಭೀಕರ ಅಪಘಾತಕ್ಕೆ ನಿದ್ರೆಯ ಮಂಪರಿನಲ್ಲಿದ್ದ ಚಾಲಕನ ನಿರ್ಲಕ್ಷ್ಯತನವೇ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಮಾರೀಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *