ಬೆಳಗಾವಿ ಮಾರ್ಚ್ 15: ಲಾರಿಯೊಂದು ಕಾರಿನ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಇಲ್ಲಿನ ಕೆಎಲ್‌ಇ ಆಸ್ಪತ್ರೆ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ರಸ್ತೆಯಲ್ಲಿ ನಡೆದಿದೆ.


ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸಿಲುಕಿಕೊಂಡ ಇಬ್ಬರನ್ನೂ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ. ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಕಾಂಕ್ರೀಟ್ ಮಿಕ್ಸರ್ ಲಾರಿ ವೇಗವಾಗಿ ಚಲಿಸುತ್ತಿದ್ದ ವೇಳೆ ಪಕ್ಕದ ಕಾರಿನ ಮೇಲೆ ಉರುಳಿಬಿದ್ದಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ರಕ್ಷಿಸಲು ಹರಸಾಹಸ ನಡೆಸಿದರು. ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.

Share Information