KARNATAKA
ಕಂಕುಳಲ್ಲಿ ಪುಟ್ಟ ಮಗುವನ್ನು ಎತ್ತಿಕೊಂಡು ಚುನಾವಣಾ ಕರ್ತವ್ಯ ನಿರ್ವಹಿಸಿದ ಪೊಲೀಸ್ ಕಾನ್‌ಸ್ಟೆಬಲ್ ಫಾತಿಮಾ ಅಲಿಖಾನ್
ಬೆಳಗಾವಿ ಮೇ 07 : ಲೋಕಸಭೆ ಚುನಾವಣೆಯ ಮತದಾನ ವೇಳೆ ತಮ್ಮ ಒಂದೂವರೆ ವರ್ಷದ ಮಗುವನ್ನು ಎತ್ತಿಕೊಂಡೇ ಕೆಲಸ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಕರ್ತವ್ಯ ನಿರ್ವಹಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೆಳಗಾವಿಯ ಗಾಂಧಿ ನಗರದ ಮತಗಟ್ಟೆ ಸಂಖ್ಯೆ 108ರಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಫಾತಿಮಾ ಅಲಿಖಾನ್ ಅವರು ತಮ್ಮ ಒಂದೂವರೆ ವರ್ಷದ ಮಗುವನ್ನು ಕಂಕುಳಲ್ಲಿ ಎತ್ತಿಕೊಂಡೇ ಚುನಾವಣಾ ಕರ್ತವ್ಯ ನಿರ್ವಹಿಸಿದರು. ಅವರ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು. ಫಾತಿಮಾ ಅವರು ಇಲ್ಲಿನ ಮಾಳಮಾರುತಿ ಠಾಣೆಯಲ್ಲಿ ಕಾನ್‌ಸ್ಟೆಬಲ್ ಆಗಿದ್ದಾರೆ. ಅವರು ಸುಡು ಬಿಸಿಲಿನಲ್ಲೂ ಮಗುವನ್ನು ಎತ್ತಿಕೊಂಡು ಭದ್ರತಾ ಕಾರ್ಯ ನಿರ್ವಹಿಸಿದರು.
You must be logged in to post a comment Login