ಬೆಳಗಾವಿ, ಏಪ್ರಿಲ್ 20: ವರದಕ್ಷಿಣಿ ಕಿರುಕುಳಕ್ಕೆ 2 ಮಕ್ಕಳ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ನ ಜ್ಯೋತಿ ನಗರದಲ್ಲಿ ನಡೆದಿದೆ. ಮೃತರನ್ನು 28 ವರ್ಷದ ಗೃಹಿಣಿ ಶ್ರೀನಿಧಿ ನಾವಿ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಪತಿ ಸಂತೋಷ್ನನ್ನು ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ.

2021ರಲ್ಲಿ ವಿವಾಹವಾಗಿದ್ದ ಶ್ರೀನಿಧಿ ಹಾಗೂ ಸಂತೋಷ್ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಸುಖಮಯವಾಗಿದ್ದ ಸಂಸಾರದಲ್ಲಿ ಇತ್ತೀಚೆಗೆ ಬಿರುಕು ಮೂಡಿತ್ತು. ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಪತಿ ಹಾಗೂ ಅತ್ತೆ ಮನೆಯವರು, ಶ್ರೀನಿಧಿಯವರಿಗೆ ತವರು ಮನೆಯವರೊಂದಿಗೆ ಮಾತನಾಡಲು ಅವಕಾಶ ನೀಡದೆ ಮಾನಸಿಕ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ. ಸಂವಹನ ಕಡಿಯುವ ಉದ್ದೇಶದಿಂದ ಪತಿ ಸಂತೋಷ್ ಆಕೆಯ ಮೊಬೈಲ್ ಫೋನ್ ಅನ್ನೂ ಕಸಿದುಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸೋಮವಾರ ಮನೆಯ ಕಿಟಕಿಯ ಗ್ರಿಲ್ಗೆ ವೇಲ್ ಬಿಗಿದ ಸ್ಥಿತಿಯಲ್ಲಿ ಶ್ರೀನಿಧಿ ಅವರ ಮೃತದೇಹ ಪತ್ತೆಯಾಗಿದೆ.
ಶ್ರೀನಿಧಿಯವರ ಸಾವು ಆತ್ಮಹತ್ಯೆಯಲ್ಲ, ಇದೊಂದು ವ್ಯವಸ್ಥಿತ ಕೊಲೆ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ. “ನನ್ನ ಮಗಳನ್ನು ಕೊಲೆ ಮಾಡಿ ನಂತರ ಆತ್ಮಹತ್ಯೆಯಂತೆ ಬಿಂಬಿಸಲು ನೇಣು ಹಾಕಲಾಗಿದೆ” ಎಂದು ಪೋಷಕರು ದೂರಿದ್ದಾರೆ. ಪತಿ, ಅತ್ತೆ ಹಾಗೂ ಇನ್ನಿಬ್ಬರು ಸಂಬಂಧಿಕರ ವಿರುದ್ಧ ಎಪಿಎಂಸಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ದೂರು ದಾಖಲಾಗುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಎಪಿಎಂಸಿ ಪೊಲೀಸರು ಪತಿ ಸಂತೋಷ್ನನ್ನು ವಶಕ್ಕೆ ಪಡೆದಿದ್ದಾರೆ. “ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವರದಿಯ ನಂತರ ಸಾವಿನ ನಿಖರ ಕಾರಣ ತಿಳಿಯಲಿದೆ.