Connect with us

BELTHANGADI

ಬೆಳಾಲು ಕಾಡಿನಲ್ಲಿ ಪತ್ತೆಯಾದ ಮಗುವಿನ ತಂದೆ ತಾಯಿಗೆ ವಿವಾಹ

ಬೆಳ್ತಂಗಡಿ ಎಪ್ರಿಲ್ 09: ಮಾರ್ಚ್ 22 ರಂದು ಬೆಳಾಲು ಗ್ರಾಮದ ಕೊಡೋಳುಕೆರೆ ಎಂಬಲ್ಲಿ ಕಾಡಿನಲ್ಲಿ ಪತ್ತೆಯಾಗಿದ್ದ ಮಗುವಿನ ತಂದೆತಾಯಿ ವಿವಾಹವಾಗಿದ್ದಾರೆ. ಕಾಡಿನಲ್ಲಿ ಪತ್ತೆಯಾದ ಶಿಶುವು ಬೆಳಾಲು ಗ್ರಾಮದ ಮಾಯ ಪ್ರದೇಶದ ನಿವಾಸಿ ರಂಜಿತ್ ಗೌಡ (27) ಹಾಗೂ ಧರ್ಮಸ್ಥಳ ಬಳಿಯ ಪಾಂಗಾಳ ನಿವಾಸಿ ಸುಶ್ಮಿತಾ ಅವರಿಗೆ ಸೇರಿದ್ದು ಎಂಬುದನ್ನು ಪೊಲೀಸರು ಪತ್ತೆಹಚ್ಚಿದ್ದರು. ಎರಡೂ ಕುಟುಂಬಗಳ ಪ್ರಮುಖರ ಸಮ್ಮುಖದಲ್ಲಿ ನಡ ಗ್ರಾಮದ ಕುತ್ತೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಅವರ ವಿವಾಹ ನಡೆಯಿತು.


ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯವರು ಶಿಶುವನ್ನು ಪುತ್ತೂರಿನ ವಾತ್ಸಲ್ಯಧಾಮ ದತ್ತು ಕೇಂದ್ರದ ಸುಪರ್ದಿಗೆ ವಹಿಸಿದ್ದಾರೆ. ‘ಶಿಶುವನ್ನು ಕಾನೂನಾತ್ಮಕವಾಗಿ ವಾಪಾಸ್ ಪಡೆಯುತ್ತೇವೆ’ ಎಂದು ದಂಪತಿ ತಿಳಿಸಿದ್ದಾರೆ. ‘ರಂಜಿತ್, ಮಂಗಳೂರಿನ ಬ್ಯೂಟಿಪಾರ್ಲ‌್ರನಲ್ಲಿ ಕೆಲಸ ಮಾಡುತ್ತಿದ್ದ ಸುಶ್ಮಿತಾಳನ್ನು ಪ್ರೀತಿಸುತ್ತಿದ್ದ. ಮದುವೆಯಾಗುವ ಭರವಸೆ ನೀಡಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದ. ಆಕೆ ಈಚೆಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಆ ಬಳಿಕ ಅವರಿಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು. ಯುವತಿಯು ಶಿಶುವನ್ನು ರಂಜಿತ್ ಗೌಡನ ಮನೆಯಲ್ಲಿ ಬಿಟ್ಟು ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯವರು ಶಿಶುವನ್ನು ಪುತ್ತೂರಿನ ವಾತ್ಸಲ್ಯಧಾಮ ದತ್ತು ಕೇಂದ್ರದ ಸುಪರ್ದಿಗೆ ವಹಿಸಿದ್ದಾರೆ. ‘ಶಿಶುವನ್ನು ಕಾನೂನಾತ್ಮಕವಾಗಿ ವಾಪಾಸ್ ಪಡೆಯುತ್ತೇವೆ’ ಎಂದು ದಂಪತಿ ತಿಳಿಸಿದ್ದಾರೆ.

‘ರಂಜಿತ್, ಮಂಗಳೂರಿನ ಬ್ಯೂಟಿಪಾರ್ಲ‌್ರನಲ್ಲಿ ಕೆಲಸ ಮಾಡುತ್ತಿದ್ದ ಸುಶ್ಮಿತಾಳನ್ನು ಪ್ರೀತಿಸುತ್ತಿದ್ದ. ಮದುವೆಯಾಗುವ ಭರವಸೆ ನೀಡಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದ. ಆಕೆ ಈಚೆಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಆ ಬಳಿಕ ಅವರಿಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು. ಯುವತಿಯು ಶಿಶುವನ್ನು ರಂಜಿತ್ ಗೌಡನ ಮನೆಯಲ್ಲಿ ಬಿಟ್ಟು ಹೋಗಿದ್ದಳು. ಆತ ಅದನ್ನು ಕಾಡಿನಲ್ಲಿ ಬಿಟ್ಟು ಹೋಗಿದ್ದ’ ಎಂದು ಪೊಲೀಸರು ಮಾಹಿತಿ ನೀಡಿದ್ದರು. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರಂಜಿತ್ ಗೌಡನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ, ಆತ ಸುಶ್ಮಿತಾ ಅವರನ್ನು ಮದುವೆಯಾಗಲು ಒಪ್ಪಿದ್ದ.

Share Information
Continue Reading
Advertisement
1 Comment

1 Comment

    Leave a Reply

    Your email address will not be published. Required fields are marked *