LATEST NEWS
ಬೆಳ್ಳಾರೆ – ಹಿಂದೂ ಮುಖಂಡನಿಗೆ ಜೀವ ಬೆದರಿಕೆ ಕರೆ- ಆರೋಪಿ ಅರೆಸ್ಟ್
ಬೆಳ್ಳಾರೆ ಸೆಪ್ಟೆಂಬರ್ 11: ಸಂಘಪರಿವಾರದ ಮುಖಂಡನಿಗೆ ಜೀವ ಬೆದರಿಕೆ ಒಡ್ಡಿದ ಆರೋಪದ ಮೇಲೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಶಫೀಕ್ ಸಹೋದರ ಶಾಫ್ರಿದ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಶಾಫ್ರಿದ್ ಶನಿವಾರ ಸಂಜೆ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಒಡ್ಡಿದ್ದಾನೆ. ಆತನನ್ನು ಠಾಣೆಗೆ ಕರೆಸಿ, ಇನ್ನು ಮುಂದೆ ನನ್ನ ತಂಟೆಗೆ ಬಾರದಂತೆ ಎಚ್ಚರಿಕೆ ನೀಡಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಬೆಳ್ಳಾರೆಯ ದೇವಿ ಹೈಟ್ಸ್ ಲಾಡ್ಜ್‌ನ ವ್ಯವಸ್ಥಾಪಕರೂ ಆಗಿರುವ ಪ್ರಶಾಂತ್ ಪೂಂಜ ಒತ್ತಾಯಿಸಿದ್ದಾರೆ.
ಇದೀಗ ಆರೋಪಿ ಸಫ್ರೀದ್ ನನ್ನು ಮಂಗಳೂರಿನ ಬಜ್ಪೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
You must be logged in to post a comment Login