DAKSHINA KANNADA
ಮಹಿಳೆ ಕುತ್ತಿಗೆಯಿಂದ ಚಿನ್ನ ಎಗರಿಸಿದ ಕಳ್ಳನನ್ನು ಹಿಡಿದ ಬೆಳ್ಳಾರೆ ಪೊಲೀಸರು..!

ಕಡಬ : ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಮಹಿಳೆಯೊಬ್ಬರ ಚಿನ್ನದ ಸರವನ್ನು ಹಾಡಹಗಲೇ ಎಗರಿಸಿದ ಇಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ನರಿಮೊಗರು ಗ್ರಾಮದ ಮುಕ್ವೆ ನಿವಾಸಿ ನೌಶಾದ್ ಬಿ ಎ (36) ಮತ್ತು ಸುಲಿಗೆಗೆ ಸಹಕರಿಸಿದ ಕಾಸರಗೋಡು ಉದ್ಯಾವರ ನಿವಾಸಿ ಚಂದ್ರಮೋಹನ್ (42) ಬಂಧಿತ ಆರೋಪಿಗಳು.ಬಂಧಿತರಿಂದ ರೂ 80,000/- ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ರೂ 1,00,000/- ಮೌಲ್ಯದ ಸ್ಕೂಟರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಈ ಪ್ರಕರಣದ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕಕರ ಮಾರ್ಗದರ್ಶನದಂತೆ ಬೆಳ್ಳಾರೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರುಗಳಾದ ಸಂತೋಷ್ ಬಿ ಪಿ ರವರು ಮತ್ತು ಅಶೋಕ್ ಸಿಎಂ ರವರ ಎರಡು ವಿಶೇಷ ತನಿಖಾ ತಂಡಗಳು ಕಾರ್ಯಾಚರಿಸಿದೆ.