DAKSHINA KANNADA
ಬೆಳ್ಳಾರೆ – ಪರಿಸ್ಥಿತಿ ಉದ್ವಿಗ್ನ – ಪೊಲೀಸರಿಂದ ಲಾಠಿ ಚಾರ್ಚ್!

ಬೆಳ್ಳಾರೆ ಜುಲೈ 27: ಬಿಜೆಪಿ ಯುವಮೋರ್ಚಾದ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ನಡುವೆ ಘಟನೆ ನಡೆದ ನಡೆದ ಬೆಳ್ಳಾರೆಯಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಪ್ರತಿಭಟನೆ ವೇಳೆ ಹಿಂದೂ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ.

ಇನ್ನು ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರಿಂದ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಲಾಠಿ ಚಾರ್ಚ್ ನಿಂದಾಗಿ ಹಲವು ಕಾರ್ಯಕರ್ತರಿಗೆ ಗಾಯಗಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ.