Connect with us

BELTHANGADI

ಸಿಎಂ ಸಿದ್ದರಾಮಯ್ಯ ಕಲೆಕ್ಷನ್ ಮಾಸ್ಟರ್ ಅಂದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ದೂರು ದಾಖಲು

ಬೆಳ್ತಂಗಡಿ ಅಕ್ಟೋಬರ್ 27: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಇದೀಗ ಮತ್ತೊಂದು ದೂರು ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ದ ಹರೀಶ್ ಪೂಂಜಾ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಕಲೆಕ್ಷನ್ ಮಾಸ್ಟರ್ (ಸಿ.ಎಂ) ಆಫ್ ಕರ್ನಾಟಕ ಎಂದು ಬರೆದು ಸಿ.ಎಂ ಸಿದ್ದರಾಮಯ್ಯ ಅವರ ಮತ್ತು ಬೆಂಗಳೂರಿನ ಸಿ.ಎಂ ನಿವಾಸದ ಫೊಟೋವನ್ನು ಫೇಸ್ ಬುಕ್‌ ನಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪೋಸ್ಟ್ ಮಾಡಿದ್ದರು.


ಇನ್ನು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ, ಮಾಜಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ ಅವರು ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ IPC 1896u/s 504, 505(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share Information
Advertisement
Click to comment

You must be logged in to post a comment Login

Leave a Reply