Connect with us

  BELTHANGADI

  ಬೆಳ್ತಂಗಡಿ : ವಿದ್ಯಾರ್ಥಿನಿ ಬಗ್ಗೆ ಕೆಟ್ಟದಾಗಿ ಬರೆದು ಅವಮಾನ, ಶಿಕ್ಷಕನ ಕೃತ್ಯಕ್ಕೆ ನೊಂದು ಬಾಲಕಿ ಜೀವಾಂತ್ಯ..!

  ಬೆಳ್ತಂಗಡಿ : ಇಲ್ಲಸಲ್ಲದ ಆರೋಪ ಮಾಡಿ ಇನ್ನೊಂದು ವಿದ್ಯಾರ್ಥಿನಿಗೆ ಮೆಸೇಜ್ ಮಾಡಿದ್ದ ಡ್ರಾಯಿಂಗ್ ಶಿಕ್ಷಕನ ಅವಮಾನಕ್ಕೆ ನೊಂದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಘಟನೆ ನಡೆದಿದೆ.

   

  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಫೆ.12ರಂದು ಮೃತಪಟ್ಟಿದ್ದಾಳೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಧರ್ಮಸ್ಥಳದ ನಿವಾಸಿ 16 ವರ್ಷದ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಶಾಲೆಯ ಡ್ರಾಯಿಂಗ್ ಶಿಕ್ಷಕ ರೂಪೇಶ್ ಪೂಜಾರಿ ಎಂಬಾತ ಮೃತಪಟ್ಟ ವಿದ್ಯಾರ್ಥಿನಿಯ ಬಗ್ಗೆ ಇನ್ನೊಂದು ವಿದ್ಯಾರ್ಥಿನಿಗೆ ಅವಮಾನ ರೀತಿಯಲ್ಲಿ ಮೆಸೇಜ್ ಮಾಡಿದ್ದ. ಈ ಬಗ್ಗೆ ವಿದ್ಯಾರ್ಥಿನಿ ವಿಷಯ ಆಕೆಗೆ ತಿಳಿಸಿದ್ದಳು. ಇದನ್ನು ಮನೆಯವರಿಗೆ ವಿದ್ಯಾರ್ಥಿನಿ ತಿಳಿಸಿದ್ದಾಳೆ. ಮರುದಿನ ತಾಯಿ ಜೊತೆ ಹೋಗಿ ವಿದ್ಯಾರ್ಥಿನಿ ವಿಚಾರಿಸಿದ್ದಾಳೆ. ಬಳಿಕ ಫೆ.7ರಂದು ವಿದ್ಯಾರ್ಥಿನಿ ಶಾಲೆಗೆ ಬರುವಾಗ ಬಿಸ್ಕೆಟ್ ಪ್ಯಾಕೆಟ್ ಜೊತೆ ಇಲಿ ಪಾಷಣ ಅಂಗಡಿಯಿಂದ ಖರೀದಿ ಮಾಡಿ ತಂದಿದ್ದಾಳೆ. ಬಳಿಕ ಶಾಲೆಯಲ್ಲಿ ಬಿಸ್ಕೆಟ್ ಜೊತೆ ಇಲಿ ಪಾಶಣ ಪೇಸ್ಟ್ ಮಿಕ್ಸ್ ಮಾಡಿ ಸೇವಿಸಿದ್ದಾಳೆ. ತಕ್ಷಣ ಶಾಲೆಯ ಶಿಕ್ಷಕರು ಆಕೆಯನ್ನು ಆಂಬುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ವಿದ್ಯಾರ್ಥಿನಿ ಲಿವರ್ ಮತ್ತು ಕಿಡ್ನಿ ನಿಷ್ಕ್ರಿಯವಾಗಿ ಫೆ.12 ರಂದು ಮುಂಜಾನೆ 5:30 ರ ಸುಮಾರಿಗೆ ಚಿಕಿತ್ಸೆ ಫಲಿಸದೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಶಿಕ್ಷಕ ರೂಪೇಶ್ ಪೂಜಾರಿ ವಿರುದ್ಧ ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಮೇರೆಗೆ IPC 354D,509,POSO Act 12 ,75JJ Act ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಡ್ರಾಯಿಂಗ್ ಶಿಕ್ಷಕ ಆರೋಪಿ ರೂಪೇಶ್ ಪೂಜಾರಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಧರ್ಮಸ್ಥಳ ಪೊಲೀಸರು ಹಾಜರುಪಡಿಸಿದ್ದು ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ.

  Share Information
  Advertisement
  Click to comment

  You must be logged in to post a comment Login

  Leave a Reply