BELTHANGADI
ಬೆಳ್ತಂಗಡಿ – ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ
ಬೆಳ್ತಂಗಡಿ ಜನವರಿ 01:ಕಾರು ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮೋಗೆರಡ್ಕ ಎಂಬಲ್ಲಿ ನಡೆದಿದೆ.
ಮೃತರನ್ನು ಮೂಡಬಿದ್ರೆಯ ಗಂಜಿಮಠ ಸುರಲ್ಪಾಡಿ ನಿವಾಸಿ ನೌಷದ್ ಹಾಜಿ (47) ಮತ್ತು ಚಾಲಕ ಉಲಾಯಿಬೆಟ್ಟು ನಿವಾಸಿ ಫಾಜಿಲ್(21) ಸಾವನ್ನಪ್ಪಿದವರು. ಇನೋವಾ ಕಾರು ಮತ್ತು ಬಸ್ಸು ನಡುವೆ ಈ ಅವಘಡ ಸಂಭವಿಸಿದೆ. ಅಪಘಾತದ ತೀವೃತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
You must be logged in to post a comment Login