Connect with us

    BELTHANGADI

    ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವದ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ

    ಬೆಳ್ತಂಗಡಿ, ಮೇ 15: ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ಯವರ ಮೇಲೆ ಹಲ್ಲೆ ನಡೆದಿದೆ.

    ಹಲ್ಲೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ  ದಯಾನಂದ ಪೂಜಾರಿ ಯವರನ್ನು ಮಾಜಿ ಶಾಸಕರಾದ ಕೆ ವಸಂತ ಬಂಗೇರ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಬೇಟಿ ಮಾಡಿ ಧೈರ್ಯ ತುಂಬಿದರು.

    ತಾಲೂಕಿನಲ್ಲಿ ಬಿಜೆಪಿ ವಿಜಯೋತ್ಸವದ ಸಂದರ್ಭದಲ್ಲಿ ಹಲವು ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮಕ್ಕೆ ಪೋಲಿಸ್ ಇಲಾಖೆಗೆ ಆಗ್ರಹಿಸಲಾಗುತ್ತದೆ ಎಂದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply