BELTHANGADI
ಬೆಳ್ತಂಗಡಿ – ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಬೈಕ್ ಸವಾರ ಸಾವು

ಬೆಳ್ತಂಗಡಿ ಎಪ್ರಿಲ್ 14:ಟಿಪ್ಪರ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿ ಸಹಸವಾರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯ ಪಣೆಜಾಲಿನ ರತ್ನಗಿರಿ ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ನಿವಾಸಿ ಉಪೇಂದ್ರ (29) ಎಂದು ಗುರುತಿಸಲಾಗಿದೆ. ಸಹಸವಾರ ಪುತ್ತೂರು ತಾಲೂಕಿನ ಕಾಣಿಯೂರು ಮೋಹನ್(29) ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಬ್ಬರು ಸ್ನೇಹಿತರಾಗಿದ್ದು, ಮೋಹನ್ ರನ್ನು ಉಪ್ಪಿನಂಗಡಿಗೆ ಬಿಟ್ಟು ಬರಲು ಉಪೇಂದ್ರ ಬೈಕಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತ ರಭಸಕ್ಕೆ ಉಪೇಂದ್ರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬೆಳ್ತಂಗಡಿ ಸಂಚಾರ ಸಬ್ ಇನ್ ಸ್ಪೆಕ್ಟರ್ ಮತ್ತು ತಂಡ ಘಟನಾ ಸ್ಥಳಕ್ಕೆ ಹಾಗೂ ಬೆಳ್ತಂಗಡಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.