BELTHANGADI
ಬೆಳ್ತಂಗಡಿ – ಡಿವೈಡರ್ ಗೆ ಬೈಕ್ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು
![](https://i0.wp.com/themangaloremirror.in/wp-content/uploads/2024/04/For-Advertisement-Please-Contact-1.jpg?fit=728%2C90&ssl=1)
ಬೆಳ್ತಂಗಡಿ ಫೆಬ್ರವರಿ 12: ಬೈಕ್ ಒಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಗುರುವಾಯನಕೆರೆ- ವೇಣೂರು ರಸ್ತೆಯಲ್ಲಿ ನಡೆದಿದೆ. ಮೃತ ಯುವಕನನ್ನು ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್ ಪೂಜಾರಿ (30) ಎಂದು ಗುರುತಿಸಲಾಗಿದೆ.
ಗುರುವಾಯನಕೆರೆಯಿಂದ ವೇಣೂರು ಕಡೆಗೆ ಹೋಗುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಚಾಲಕ ಎಸೆಯಲ್ಪಟ್ಟು ತಲೆ ವಿದ್ಯುತ್ ಕಂಬಕ್ಕೆ ಹೊಡೆದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ, ಸ್ಥಳೀಯರ ಸಹಕಾರದಲ್ಲಿ ಮೃತದೇಹವನ್ನು ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಗಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)