Connect with us

    BELTHANGADI

    ಬೆಳ್ತಂಗಡಿ -ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ – ಸವಾರ ಸಾವು

    ಬೆಳ್ತಂಗಡಿ ಡಿಸೆಂಬರ್ 21: ಬೈಕ್ ಹಾಗೂ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಿನ್ನೆ ಲಾಯಿಲ ಸಮೀಪ ನಡೆದಿದೆ. ಮೃತ ಬೈಕ ಸವಾರನನ್ನು ಉಜಿರೆ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ವಿಜಯ ಎಂದು ಗುರುತಿಸಲಾಗಿದೆ.


    ಉಜಿರೆಯಲ್ಲಿ ಕೆಲಸ ಮುಗಿಸಿ ಆತ ಮನೆಗೆ ಹಿಂತಿರುಗುತ್ತಿದ್ದ ವೇಳೆ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆನ್ನಲಾಗಿದೆ. ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
    ವೇಗವಾಗಿ ಬಂದ ಬಸ್ ಬೈಕಿಗೆ ಢಿಕ್ಕಿ ಹೊಡೆದಿದೆನ್ನಲಾಗಿದ್ದು, ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply