Connect with us

  BELTHANGADI

  ಬೆಳ್ತಂಗಡಿ – 5 ಬಾರಿ ಸ್ಪೋಟ ಆಗಿತ್ತು…ಸ್ಪೋಟ ಆಗುತ್ತಿದ್ದಂತೆ ಕಣ್ಣು ಮಂಜಾಯಿತು…!!

  ಬೆಳ್ತಂಗಡಿ ಜನವರಿ 29: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪಟಾಕಿ ಗೋದಾಮಿನಲ್ಲಿ ನಡೆದ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಆರೋಪಿ ಸಯ್ಯದ್​ ಬಶೀರ್​ನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಸ್ಫೋಟದ ತೀರ್ವತೆಗೆ ಸುತ್ತಮುತ್ತಲಿನ ಮನೆಗಳಿಗೆ ಹಾನಿಯಾಗಿದೆ. ಸ್ಪೋಟ ಸಂಭವಿಸಿದ ಸ್ಥಳ ಸುತ್ತಮುತ್ತ ಮನೆಯೊಂದರಲ್ಲಿ ವೃದ್ದ ದಂಪತಿ ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ.


  ಸ್ಪೋಟಗೊಂಡ ಗೋದಾಮಿನ ಪಕ್ಕದಲ್ಲಿ ಈ ವೃದ್ದ ದಂಪತಿಯ ಮನೆ ಇದ್ದು, ಈ ಮನೆಯಲ್ಲಿ ವೃದ್ಧ ದಂಪತಿ ವಾಸವಾಗಿದ್ದಾರೆ. ರವಿವಾರ ಸ್ಪೋಟಗೊಂಡ ಸಮಯದಲ್ಲಿ ವೃದ್ಧ ದಂಪತಿ ಮನೆಯ ಹೊರಗಡೆ ಕೂತು ಚಹಾ ಕುಡಿಯುತ್ತಿದ್ದರು. ಈ ವೇಳೆ ಗೋದಾಮಿನಲ್ಲಿ ಸ್ಪೋಟ ಸಂಭವಿಸಿದೆ. ಸ್ಪೋಟದ ತೀರ್ವತೆಗೆ ವೃದ್ಧ ದಂಪತಿಯ ಮನೆ ಕೂಡ ಕುಸಿದು ಬಿದ್ದಿದೆ. ಅದೃಷ್ಟವಶಾತ್​​ ದಂಪತಿ ಹೊರಗಡೆ ಇದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಸ್ಫೋಟದ ತೀರ್ವತೆಗೆ ಸುತ್ತಮುತ್ತಲಿನ ಮನೆಗಳಿಗೆ ಹಾನಿಯಾಗಿದ್ದು, ಸಂಪೂರ್ಣವಾಗಿ ಕುಸಿದು ಬಿದ್ದಿವೆ. ಛಾವಣಿಯ ಶೀಟ್​ಗಳು ತುಂಡು ತುಂಡಾಗಿ ಮುರಿದು ಕೆಳಗೆ ಬಿದ್ದಿವೆ.


  ಒಟ್ಟು ಐದು ಬಾರಿ ಸ್ಫೋಟ ಸಂಭವಿಸಿತು. ಸ್ಫೋಟ ಆಗುತ್ತಿದ್ದಂತೆಯೇ ಕಣ್ಣು ಮಂಜಾಯಿತು. ಮನೆಯ ಶೀಟ್​ಗಳು ಮುರಿದು ಕೆಳಗೆ ಬಿದ್ದವು. ಮನೆ ಜಖಂಗೊಂಡಿದೆ. ಈ ಹಿನ್ನೆಲೆಯಲ್ಲಿ ಸರಕಾರ ಪರಿಹಾರ‌ ನೀಡಬೇಕು ಎಂದು ವೃದ್ಧ ದಂಪತಿ ಆಗ್ರಹಿಸಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply