BELTHANGADI
ಬೆಳ್ತಂಗಡಿ – ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಮೂವರಿಗೆ ಗಂಭೀರ ಗಾಯ

ಬೆಳ್ತಂಗಡಿ ಎಪ್ರಿಲ್ 21: ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾಯನಕೆರೆ ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ಸಂಜೆ ನಡೆದಿದೆ.
ಈ ಭೀಕರದ ಅಪಘಾತದಲ್ಲಿಕಾರಿನಲ್ಲಿದ್ದ ಗೇರುಕಟ್ಟೆಯ ಕುಸುಮಾವತಿ (75), ಭಾಗ್ಯವತಿ (50) ಹಾಗೂ ವೈಭವ್ (23) ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಳದಂಗಡಿಯಿಂದ ಗುರುವಾಯನಕೆರೆ ಕಡೆ ಬರುತ್ತಿದ್ದ ಕಾರು ಗುರುವಾಯನಕೆರೆಯಿಂದ ಹಾಗೂ ಕಾರ್ಕಳದತ್ತ ಪ್ರಯಾಣಿಸುತ್ತಿದ್ದ ಕಾರುಗಳು ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
