ಬೆಳ್ತಂಗಡಿ ನವೆಂಬರ್ 11: ನೂತನ ಬೆಳ್ತಂಗಡಿ ಪೊಲೀಸ್ ಉಪವಿಭಾಗದ ಡಿವೈಎಸ್‌ಪಿಯಾಗಿ ರೋಹಿಣಿ ಅಧಿಕಾರ ಸ್ವೀಕರಿಸಿದ್ದಾರೆ.

ಪೊಲೀಸ್ ಉಪವಿಭಾಗದ ಡಿವೈಎಸ್‌ಪಿಯಾಗಿ ಬೆಂಗಳೂರು ವೈಟ್ ಫೀಲ್ಡ್ ಸೆನ್ ಡಿವೈಎಸ್‌ಪಿಯಾಗಿದ್ದ ರೋಹಿಣಿ ಸಿ.ಕೆ. ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಅವರು ಸೋಮವಾರ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ವೃತ್ತ ನಿರೀಕ್ಷಕ ಸುಬ್ಬಾಪುರ ಮಠ್, ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ, ಧರ್ಮಸ್ಥಳ, ವೇಣೂರು, ಪುಂಜಾಲಕಟ್ಟೆ, ಕಡಬ, ಉಪ್ಪಿನಂಗಡಿ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್‌ಗಳು ಅವರನ್ನು ಸ್ವಾಗತಿಸಿದರು.
Read This – ದೆಹಲಿ – ಹುಂಡೈ ಐ20 ಕಾರಿನಲ್ಲಿ ಸ್ಫೋಟ – ಸಾವಿನ ಸಂಖ್ಯೆ 9ಕ್ಕೆ ಏರಿಕೆ
ರೋಹಿಣಿ ಅವರು 2022ರ ಬ್ಯಾಚ್‌ನಲ್ಲಿ ನೇರ ನೇಮಕವಾದ ಡಿವೈಎಸ್‌ಪಿಯಾಗಿದ್ದಾರೆ. ಮೂಲತಃ ಬೆಂಗಳೂರಿನ ಮಲ್ಲೇಶ್ವರಂನವರು. ಜಿಲ್ಲೆಯ ಅತಿ ದೊಡ್ಡ ತಾಲ್ಲೂಕು ಆಗಿರುವ ಬೆಳ್ತಂಗಡಿಗೆ ಮೊದಲ ಬಾರಿಗೆ ಉಪವಿಭಾಗ ತೆರೆಯಲಾಗಿದೆ.



