BELTHANGADI
ಬೆಳ್ತಂಗಡಿ – ಎದೆನೋವಿಗೆ ಚಿಕಿತ್ಸೆಗೆ ತೆರಳಿದ್ದ ವೇಳೆ ಹೃದಯಾಘಾತದಿಂದ ಸಾವು

ಬೆಳ್ತಂಗಡಿ ಜುಲೈ 01: ಎದೆನೋವು ಕಾಣಿಸಿಕೊಂಡ ಹಿನ್ನಲೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದ ವ್ಯಕ್ತಿ ಅಲ್ಲೆ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕಲ್ಲಾಜೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮೃತರನ್ನು ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ(53) ಎಂದು ಗುರುತಿಸಲಾಗಿದೆ. ಆರೋಗ್ಯವಾಗಿದ್ದ ವಜ್ರಾಕ್ಷ ಪೂಜಾರಿ ದಿನನಿತ್ಯದಂತೆ ಸೋಮವಾರವೂ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಬಂದಿದ್ದರು. ರಾತ್ರಿ ವೇಳೆ ಎದೆನೋವು ಕಾಣಿಸಿದ ಹಿನ್ನೆಲೆಯಲ್ಲಿ ತನ್ನ ಸ್ಕೂಟರ್ ನಲ್ಲಿ ಉಜಿರೆ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಮುಂದಾದಾಗಿದ್ದಾರೆ. ಈ ವೇಳೆ ಕುಸಿದು ಬಿದ್ದಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.
