ಬೆಳ್ತಂಗಡಿ ಜನವರಿ 17: ಹಾಡುಹಗಲೇ ರಸ್ತೆ ಬದಿಯಲ್ಲಿ ಕಾಣಿಸಿಕೊಂಡ ಚಿರತೆಯೊಂದು ಪ್ರತ್ಯಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ರೆಂಜಾಳ ಗ್ರಾಮಪಂಚಾಯತ್ ವ್ಯಾಪ್ತಿಯ ಪಂಜಾಳಕೆರೆ ಎಂಬಲ್ಲಿ ನಡೆದಿದೆ.

ರಸ್ತೆಯ ಪಕ್ಕದಲ್ಲಿ ಹೊಂಚು ಹಾಕಿತ್ತಿದ್ದ ಚಿರತೆಯನ್ನು ಗಮನಿಸಿದ ಪ್ರಯಾಣಿಕರು ಚಿರತೆಯ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾತಲತಾಣದಲ್ಲಿ ಎಚ್ಚರಿಕೆಯ ಸಂದೇಶ ಹರಡಿದ್ದಾರೆ. ರಸ್ತೆಯಲ್ಲಿ ತೆರಳುವ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಚಿಸಿದ್ಸು, ಚಿರತೆಯನ್ನು ಸೆರೆಹಿಡಿಯಲು ಕ್ರಮ ಕೈಗೊಂಡಿದ್ದಾರೆ.



