Connect with us

    BELTHANGADI

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕೊರೊನಾ ಪಾಸಿಟಿವ್

    ಬೆಳ್ತಂಗಡಿ ಅಗಸ್ಟ್ 05: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಕುರಿತಂತೆ ಟ್ವೀಟ್ ರಲ್ಲಿ ಮಾಹಿತಿ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗುವ ಮುನ್ನ ಹರೀಶ್ ಪೂಂಜಾ ಸಿಎಂ ಅವರನ್ನು ಭೇಟಿಯಾಗಿದ್ದರು.


    ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢವಾದ ಹಿನ್ನಲೆ ಹರೀಶ್ ಪೂಂಜಾ ಅವರು ಮಂಗಳೂರಿನಲ್ಲಿ ಕ್ವಾರಂಟೈನ್ ಗೆ ಒಳಗಾಗಿದ್ದರು. ಅಲ್ಲದೇ ಕೋವಿಡ್ ಟೆಸ್ಟ್ ಗೂ ಒಳಪಟ್ಟಿದ್ದರು. ಇದೀಗ ವರದಿ ಬಂದಿದ್ದು, ಸೋಂಕು ತಗುಲಿರೋದು ದೃಢವಾಗಿದೆ.

     


    ಈ ಕುರಿತಂತೆ ಮಾಹಿತಿ ಟ್ವೀಟರ್ ನಲ್ಲಿ ಮಾಹಿತಿ ನೀಡಿದ ಶಾಸಕ ಹರೀಶ್ ಪೂಂಜಾ ಸಣ್ಣ ಮಟ್ಟಿನ ಜ್ವರ ಇದ್ದ ಕಾರಣ ಮಾಡಿಸಿದ ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ಸಣ್ಣ ಮಟ್ಟಿನ ಜ್ವರ ಬಿಟ್ಟು ಬೇರೆ ಯಾವುದೇ ಲಕ್ಷಣಗಳಿಲ್ಲದೆ ಇರುವುದರಿಂದ ಮನೆಯಲ್ಲಿಯೇ ಶುಶ್ರೂಷೆ ಪಡೆಯುತ್ತಿದ್ದೇನೆ. ಕಳೆದ ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆವಹಿಸಿ ಎಂದು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply