Connect with us

BELTHANGADI

ಬೆಳ್ತಂಗಡಿ – ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ ಸಾವು ಮಗ ಗಂಭೀರ

ಬೆಳ್ತಂಗಡಿ ಮೇ 13: ನಿದ್ರೆ ಮಾತ್ರೆ ಸೇವಿಸಿ ತಾಯಿ ಮತ್ತು ಮಗ ಆತ್ಮಹತ್ಯೆ ಯತ್ನಿಸಿದ್ದ ಘಟನೆ ಸೋಮವಾರ ನಡೆದಿದ್ದು, ವೃದ್ದೆ ತಾಯಿ ಸಾವಿಗೀಡಾಗಿ ಮಗ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರನ್ನು ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ಕಲ್ಯಾಣಿ (96) ಎಂದು ಗುರುತಿಸಲಾಗಿದ್ದು, ಅವರ ಮಗ ಖ್ಯಾತ ಜನಪದ ಕಲಾವಿದ, ಶಿಕ್ಷಕ ಜಯರಾಂ ಕೆ. (58) ಅವರು ಗಂಭೀರ ಸ್ಥಿತಿಯಲ್ಲಿದ್ದು ಮಂಗಳೂರಿನ ವೆನ್ಲಾಕ್‌ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.


ಕಲ್ಯಾಣಿ ಮತ್ತು ಜಯರಾಂ ಅವರ ಕೂಳೂರಿನ ಮನೆಯಲ್ಲಿ ವಾಸವಿದ್ದು, ಮನೆಯಿಂದ ಯಾರೂ ಹೊರಗೆ ಬಾರದ ಹಿನ್ನಲೆ ಸ್ಥಳೀಯರು ಹೋಗಿ ನೋಡಿದಾಗ ತಾಯಿ ಮತ್ತು ಮಗ ದೇವರ ಕೋಣೆ ಎದುರು ಪ್ರಜ್ಞಾ ಹೀನ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ಕೂ಼ಲೇ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ನಿಗಾ ಘಟಕದಲ್ಲಿದ್ದ ತಾಯಿ ಕಲ್ಯಾಣಿ ಅವರು ಮೇ 12ರಂದು ಸಂಜೆ ಕೊನೆಯುಸಿರೆಳೆದರು. ಮಗ ಜಯರಾಂ ಅವರ ಆರೋಗ್ಯ ಸ್ಥಿತಿ ಇನ್ನಷ್ಟು ವಿಷಮಿಸಿದ್ದರಿಂದ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಯಿ ಮಲಗಿದ ಜಾಗದಲ್ಲಿ ಜಯರಾಂ ಅವರು ಬರೆದಿರುವ ನಾಲ್ಕು ಪುಟ ಗಳ ಪತ್ರ ಲಭಿಸಿದ್ದು ಅದರಲ್ಲಿ ಸಾಲದ ಸಮಸ್ಯೆ, ತನ್ನ ಅನಾರೋಗ್ಯದ ಕಾರಣ ದಿಂದ ನಾವು ನಿದ್ರೆ ಮಾತ್ರೆ ಸೇವಿಸಿರುತ್ತೇವೆ. ನಮ್ಮನ್ನು ಬದುಕಿಸುವ ಪ್ರಯತ್ನ ಮಾಡಬೇಡಿ ಎಂದು ಬರೆಯಲಾಗಿದೆ. ತಾಯಿ ಕಳೆದ ನಾಲ್ಕು ವರ್ಷಗಳಿಂದ ವಯೋ ಸಹಜ ಅನಾರೋಗ್ಯದಿಂದ ಮಲಗಿದಲ್ಲೇ ಇದ್ದು ಅವರ ಆರೈಕೆಯನ್ನು ಮಗನೇ ಮಾಡುತ್ತಿದ್ದರು.
ಆದ್ದರಿಂದ ನಾನು ಸತ್ತರೆ ಅಮ್ಮನನ್ನು ನೋಡಿಕೊಳ್ಳುವವರು ಯಾರು ಎಂಬ ಕಾರಣಕ್ಕೆ ನಾವಿಬ್ಬರೂ ಜತೆಯಾಗಿ ಸಾಯುತ್ತಿದ್ದೇವೆ ಎಂದು ಬರೆದಿದ್ದಾರೆ ಎನ್ನಲಾಗಿದೆ. ತಾಯಿಗೆ ಅವರು ಮೊದಲು ಮಾತ್ರೆ ನೀಡಿ ಬಳಿಕ ಪುತ್ರ ಮಾತ್ರೆ ಸೇವಿಸಿದರೇ ಅಥವಾ ಇಬ್ಬರೂ ಜತೆಗೆ ಮಾತ್ರೆ ಸೇವಿಸಿದ್ದಾರೆಯೇ ಎಂಬುದು ಗೊತ್ತಾಗಿಲ್ಲ.

ಜಯರಾಂ ಅವರು ಕಲಾವಿದರಾಗಿ, ನಾಟಕ ರಚನೆಕಾರ ರಾಗಿ, ಜಾನಪದ ಕಲಾರಾಧಕರಾಗಿ, ಚಿತ್ರಕಲಾ ಶಿಕ್ಷಕರಾಗಿ ರಾಜ್ಯಮಟ್ಟದ ಹಲವು ಪ್ರಶಸ್ತಿ ಪಡೆದುಕೊಂಡಿದ್ದರು. ಸಂಪನ್ಮೂಲ ವ್ಯಕ್ತಿಯಾಗಿಯೂ ಇದ್ದ ಅವರು 26 ವರ್ಷಗಳಿಂದ ಮುಂಡಾಜೆಯಲ್ಲಿ ಕಲಾಕುಂಚ ಆರ್ಟ್ಸ್ ಎಂಬ ಟ್ಯೂಶನ್‌ ಸೆಂಟರ್‌ನಡೆಸುತ್ತಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *