Connect with us

    BELTHANGADI

    ಆತ್ಮಹತ್ಯೆಗೆ ಯತ್ನಿಸಿದ್ದ ತಂದೆ, ಮಗಳು ಸಾವು

    ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳ್ತಂಗಡಿ ತಾಲ್ಲೂಕಿನ ಕೊಕ್ರಾಡಿ ಗ್ರಾಮದ ಅತ್ರಿಜಾಲು ಸಮೀಪದ ನಿವಾಸಿ ಚೇತನ್‌ (35) ಹಾಗೂ ಅವರ ಪುತ್ರಿ ತ್ರಿಶಾ ಮೃತಪಟ್ಟಿದ್ದಾರೆ. ಚೇತನ್‌ ಅವರ ಪತ್ನಿ ಆಶಾ (30) ಅವರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


    ಸೋಮವಾರ ಮನೆಯೊಳಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅವರನ್ನು ಕಾರ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಯಿತು. ತ್ರಿಶಾ ಸೋಮವಾರ ರಾತ್ರಿಯೇ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ಚೇತನ್‌ ಅವರು ಮಂಗಳವಾರ ರಾತ್ರಿ ಸಾವನ್ನಪ್ಪಿದರು. ಈ ಬಗ್ಗೆ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply