BELTHANGADI
ಬೆಳ್ತಂಗಡಿ ಕಳ್ಳತನ ಪ್ರಕರಣ – ಮೂವರು ಆರೋಪಿಗಳು ಪೊಲೀಸ್ ಬಲೆಗೆ

ಬೆಳ್ತಂಗಡಿ ನವೆಂಬರ್ 13: ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಎಂಬಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮಹಮ್ಮದ್ ಸ್ವಾಲಿ, ಯಾಹ್ಯಾ, ಬಿ.ಹೆಚ್ ನೌಫಲ್ ಎಂದು ಗುರುತಿಸಲಾಗಿದೆ. ಆರೋಪಿಗಳು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನುಗ್ಗಿ ಮನೆಯ ಗೋದ್ರೇಜ್ ನಲ್ಲಿಟ್ಟಿದ್ದ 12 ಲಕ್ಷ ಮೌಲ್ಯದ 40 ಪವನ್ ಚಿನ್ನಾಭರಣಗಳು ಮತ್ತು ನಗದು ಹಣ 5200 ರೂಪಾಯಿ ಕಳವು ಮಾಡಿದ್ದಾರೆ. ಈ ಕುರಿತಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬೆನ್ನತ್ತಿದ್ದ ಪೊಲೀಸರು ಆರೋಪಿಗಳನ್ನು ಪತ್ತೆ ಮಾಡಿ ಆರೋಪಿಗಳು ಕೃತ್ಯಕ್ಕೆ ಉಪಯೋಗಿಸಿದ ಕಾರು , ಬೈಕ್ ಹಾಗೂ ಕಳವಾದ 12,05,200 ರೂಪಾಯಿ ಮೌಲ್ಯದ 320 ಗ್ರಾಂ ಚಿನ್ನಾಭರಣಗಳು ನಗದು 1230 ರೂ ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.