BELTHANGADI
ಬೆಳ್ತಂಗಡಿ – ವಿಪರೀತ ಜ್ವರಕ್ಕೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವು
ಬೆಳ್ತಂಗಡಿ ಡಿಸೆಂಬರ್ 07: ವಿಪರೀತ ಜ್ವರದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಮೃತರನ್ನು ಬಳಂಜದ ಜನತಾ ಕಾಲನಿ ನಿವಾಸಿ ವಸಂತಿ (45) ಎಂದು ಗುರುತಿಸಲಾಗಿದೆ. ಅವರು ಕೆಲವು ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಡಿಸೆಂಬರ್ 6 ರಂದು ಸಾವನ್ನಪ್ಪಿದ್ದಾರೆ. ಮೃತರು ಮುಂಬಯಿಯಲ್ಲಿ ಉದ್ಯೋಗದಲ್ಲಿರುವ ಪತಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
1 Comment