Connect with us

    BELTHANGADI

    ಬೆಳ್ತಂಗಡಿ: ಹೊಸ ವರ್ಷದ ಪಾರ್ಟಿಯಲ್ಲಿ ಸ್ನೇಹಿತನ ಮೂಗು ಕಚ್ಚಿ ತುಂಡರಿಸಿದ ಆರೋಪಿ ಅರೆಸ್ಟ್..!

    ಬೆಳ್ತಂಗಡಿ: ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಎಣ್ಣೆಯ ಅಮಲಿನಲ್ಲಿ ಸ್ನೇಹಿತನ ಜತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿ ಮೂಗು ಕಚ್ಚಿ ತುಂಡರಿಸಿದ ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ರಾಕೇಶ್‌ (21 ವೇಣೂರು ಪೊಲೀಸರಿಂದ ಬಂಧಿಸ್ಪಟ್ಟ ಆರೋಪಿಯಾಗಿದ್ದಾನೆ. ಮೂಲತಃ ಮೂಡಿಗೆರೆ ತಾಲೂಕಿನವನಾಗಿದ್ದ ರಾಕೇಶ್ ಪ್ರಸ್ತುತ ಬೆಳ್ತಂಗಡಿ ಪಿಲ್ಯ ಗ್ರಾಮದ ಮಾರಿಗುಡಿ ಬಳಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತ ಹೊಸ ವರ್ಷದ ಪಾರ್ಟಿ ವೇಳೆ ಸ್ನೇಹಿತ ದೀಕ್ಷಿತ್‌ (28)ನ ಮೂಗು ಕಚ್ಚಿ ಗಂಭೀರ ಗಾಯಗೊಳಿಸಿದ್ದ. ಘಟನೆಯಿಂದ ಗಾಯಗೊಂಡ ದೀಕ್ಷಿತ್‌ ವೆನ್ಲಾಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೇಣೂರು ಠಾಣೆಯಲ್ಲಿ ದೀಕ್ಷಿತ್‌ ನೀಡಿದ ದೂರಿನಂತೆ ಆರೋಪಿ ರಾಕೇಶ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ಣೂರು ಉಪನಿರೀಕ್ಷಕ ಶ್ರೀಶೈಲಾ ನೇತೃತ್ವದ ತಂಡ ಜ. 2ರಂದು ಆರೋಪಿ ರಾಕೇಶ್‌ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply