Connect with us

BELTHANGADI

ಬೆಳ್ತಂಗಡಿ : ಬಸ್‌ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಮದರಸ ಶಿಕ್ಷಕನಿಗೆ ಜೈಲು ಶಿಕ್ಷೆ..!

Share Information

ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿದ ಆರೋಪಿಗೆ ಬೆಳ್ತಂಗಡಿ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

ಬೆಳ್ತಂಗಡಿ : ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿದ ಆರೋಪಿಗೆ ಬೆಳ್ತಂಗಡಿ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ಬಣ್ಣ ಮೂಲದ ಮದರಸ ಶಿಕ್ಷಕ ಮುಹಮ್ಮದ್‌ ಸೈಫುಲ್ಲಾ ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ.

ಧರ್ಮಸ್ಥಳ-ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ ಉಪ್ಪಿನಂಗಡಿ ಸಮೀಪದ ಇಳಂತಿಲ ಕಡವಿನಬಾಗಿಲು ಎಂಬಲ್ಲಿ ಸಾಗುತ್ತಿದ್ದ ವೇಳೆ ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿ ಆಕೆಯ ಮಾನಭಂಗಕ್ಕೂ ಯತ್ನಿಸಿದ್ದ ಮುಹಮ್ಮದ್‌ ಸೈಫುಲ್ಲಾ.

ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಸೈಫುಲ್ಲ ವಿರುದ್ದ ಪ್ರಕರಣ ದಾಖಲಾಗಿತ್ತು.

ಸೈಫುಲ್ಲ ವಿರುದ್ಧ ಪೊಲೀಸರು ಬೆಳ್ತಂಗಡಿ ಹಿರಿಯ ಸಿವಿಲ್‌ ಮತ್ತು ಜೆ.ಎಂ.ಎಫ್‌.ಸಿ. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ದೇವರಾಜ ಎಚ್‌.ಎಂ. ಅವರು ಆರೋಪಿ ಮುಹಮ್ಮದ್‌ ಸೈಫುಲ್ಲಾ ಅಪರಾಧಿ ಎಂದು ಘೋಷಿಸಿ ಆತನಿಗೆ 6 ತಿಂಗಳು ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿದ್ದಾರೆ.


Share Information
Advertisement
Click to comment

You must be logged in to post a comment Login

Leave a Reply