Connect with us

  KARNATAKA

  ಪ್ರಿಯತಮೆಯನ್ನು ಅಪಾರ್ಟ್ ಮೆಂಟ್ ನ ತಳ್ಳಿ ಆತ್ಮಹತ್ಯೆ ಎಂದ ಟೆಕ್ಕಿ ಅರೆಸ್ಟ್

  ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಬಿದ್ದು ಸಾವನಪ್ಪಿದ ಗಗನಸಖಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಪ್ರಿಯಕರನೇ ತನ್ನನ್ನು ನೋಡಲು ಬಂದಿದ್ದ ಗೆಳತಿಯನ್ನು ತಳ್ಳಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.


  ಹಿಮಾಚಲ ಮೂಲದ ಗಗನಸಖಿ ಅರ್ಚನಾ ತನ್ನ ಪ್ರಿಯಕರನ್ನು ನೋಡಲು ಬೆಂಗಳೂರಿಗೆ ಬಂದು ಅಪಾರ್ಟ್ ಮೆಂಟ್ ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಪ್ರಕರಣ ದಾಖಲಾಗಿತ್ತು, ಆದರೆ ಮೃತ ಯುವತಿ ತಂದೆ ದೇವರಾಜ್ ಅವರು ಬಹುಮಹಡಿ ಕಟ್ಟಡದಿಂದ ಮಗಳನ್ನು ತಳ್ಳಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಆದೇಶ್‌ ವಿರುದ್ಧ ದೂರು ನೀಡಿದ್ದರು, ಪ್ರಕರಣ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆದೇಶ್ ವಿಚಾರಣೆ ನಡೆಸಿದಾಗ ಕೊಲೆಯ ಮಾಹಿತಿ ಲಭಿಸಿದೆ. ಬೆಂಗಳೂರಿನಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿದ್ದ ಕೇರಳದ ಆದೇಶ್, ಗಗನಸಖಿ 28 ವರ್ಷದ ಅರ್ಚನಾ ಮಧ್ಯೆ ಮೂರು ವರ್ಷಗಳ ಹಿಂದೆ ಡೇಟಿಂಗ್ ಆಪ್‍ನಲ್ಲಿ ಪರಿಚಯವಾಗಿತ್ತು.


  ಪರಿಚಯ ಕಾಲ ಕಳೆದಂತೆ ಪ್ರೀತಿಯಾಗಿ ಬದಲಾಗಿತ್ತು. ಕಳೆದ ಮೂರು ತಿಂಗಳಿನಿಂದ ಪ್ರಿಯಕರ ಆದೇಶ್, ಪ್ರಿಯತಮೆ ಅರ್ಚನಾಳ ಜೊತೆ ಸಂಬಂಧ ಕಡಿದುಕೊಳ್ಳಲು ಮುಂದಾಗಿದ್ದ. ಆದೇಶ್‌ ಮೊದಲಿನಂತೆ ಮಾತನಾಡದ್ದಕ್ಕೆ ಬೇಸರಗೊಂಡಿದ್ದ ಹಿಮಾಚಲ ಪ್ರದೇಶದ ಮೂಲದ ಅರ್ಚನಾ ದುಬೈನಿಂದ ಗೆಳೆಯನನ್ನು ನೋಡಲು ಕೋರಮಂಗಲದ ನಾಲ್ಕನೇ ಹಂತದಲ್ಲಿರುವ ಮನೆಗೆ ಬಂದಿದ್ದಳು.

  ಮಾರ್ಚ್‌ 10 ರಂದು ನಗರದ ಪ್ರತಿಷ್ಠಿತ ಪಬ್‌, ಹೋಟೆಲ್, ಸಿನಿಮಾ ಎಂದು ಸುತ್ತಾಡಿಸಿ ರಾತ್ರಿ ಮನೆಗೆ ಕರೆದುಕೊಂಡು ಹೋಗಿದ್ದ. ಈ ಸಂದರ್ಭದಲ್ಲಿ ಅರ್ಚನಾ ಮದುವೆ ವಿಚಾರವನ್ನು ಪ್ರಸ್ತಾಪ ಮಾಡಿದ್ದಳು. ಈ ವಿಚಾರವಾಗಿ ಇಬ್ಬರ ಮಧ್ಯೆ ಜೋರು ಗಲಾಟೆ ನಡೆದಿದೆ.
  ಈ ಗಲಾಟೆ ವಿಕೋಪಕ್ಕೆ ಹೋಗಿದ್ದರಿಂದ ರಾತ್ರಿ 12 ಗಂಟೆಯ ವೇಳೆಗೆ ಆದೇಶ್, ಅರ್ಚನಾಳನ್ನು ಜೋರಾಗಿ ಹಿಂದಕ್ಕೆ ತಳ್ಳಿದ್ದ. ಪರಿಣಾಮ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದ ಅರ್ಚನಾ ಸ್ಥಳದಲ್ಲೇ ಸಾವನ್ನಪ್ಪಿದ್ದಳು.

  Share Information
  Advertisement
  Click to comment

  You must be logged in to post a comment Login

  Leave a Reply