KARNATAKA
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ಭೀಕರ ಅಪಘಾತ – ಕಾರಿನಲ್ಲಿದ್ದ ನಾಲ್ವರು ಬಲಿ

ಮಂಡ್ಯ ಎಪ್ರಿಲ್ 03: ಕೆಎಸ್ಆರ್ ಟಿಸಿ ಐರಾವತ್ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಚನೆ ಮಂಡ್ಯ ತಾಲ್ಲೂಕು ತೂಬಿನಕೆರೆ ಎಕ್ಸಿಟ್ ಬಳಿ ನಡೆದಿದೆ.
ಕಾರು ಮೈಸೂರು ಕಡೆಗೆ ಹೊರಟಿತ್ತು. ಈ ವೇಳೆ ಎಕ್ಸ್ಪ್ರೆಸ್‌ವೇನಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲ ಉಂಟಾಗಿದ್ದು, ಮತ್ತೆ ಕಾರನ್ನು ಎಕ್ಸ್ಪ್ರೆಸ್ ವೇಗೆ ತಿರುಗಿಸಿದ್ದಾನೆ. ಇದೇ ವೇಳೆ ಹಿಂದಿನಿಂದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಬಂದಿದ್ದು, ಎದುರಿಗೆ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಸೋದರಮಾವನ ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ಜೆಪಿ ನಗರದವರೆಂದು ಗುರುತಿಸಲಾಗಿದೆ, 52 ವರ್ಷದ ಸತ್ಯಾನಂದ ರಾಜೇ ಅರಸ್, ಪತ್ನಿ ನಿಶ್ಚಿತಾ , ಚಂದ್ರು ಮತ್ತು ಸುವೇದಿನಿ ರಾಣಿ ಎಂದು ಗುರುತಿಸಲಾಗಿದೆ, ಸ್ಥಳಕ್ಕೆ ದಕ್ಷಿಣ ವಲಯ ಐಜಿ ಬೋರಲಿಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.