LATEST NEWS
ಬೆಂಗಳೂರು – 10 ವರ್ಷದ ಬಾಲಕಿ ಮೇಲೆ ರೇಪ್ ಮಾಡಿ ಕೆಕ್ ಕೊಟ್ಟು ಮನೆಗೆ ಕಳುಹಿಸಿದ ಪ್ರಾಂಶುಪಾಲ…!!
ಬೆಂಗಳೂರು ಅಗಸ್ಟ್ 04 : 10 ವರ್ಷ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಶಾಲೆಯ ಪ್ರಾಂಶುಪಾಲನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದೀಗ ಆರೋಪಿ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್ (65) ಅವರನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ನಿನ್ನೆ ಶಾಲೆಯ ಕೊಠಡಿಯಲ್ಲೇ ಕೃತ್ಯ ನಡೆದಿದ್ದು, ಖಾಲಿ ರೂಮ್ಗೆ ಬಾಲಕಿಯನ್ನು ಕರೆದುಕೊಂಡು ಹೋಗಿ ಶಾಲೆಯ ಪ್ರಾಂಶುಪಾಲನೇ ಕೃತ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ‘ಅತ್ಯಾಚಾರದ ಬಳಿಕ ಆರೋಪಿ, ಬಾಲಕಿಗೆ ಕೇಕ್ ಕೊಟ್ಟು ಮನೆಗೆ ಕಳುಹಿಸಿದ್ದ. ಮನೆಗೆ ಹೋಗಿದ್ದ ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಜೊತೆಗೆ, ಒಳ ಉಡುಪಿನಲ್ಲಿ ರಕ್ತಸ್ರಾವವಾಗಿತ್ತು. ಅದನ್ನು ಗಮನಿಸಿದ್ದ ತಾಯಿ, ಆಸ್ಪತ್ರೆಗೆ ಕರೆದೊಯ್ದಿದ್ದರು. ತಪಾಸಣೆ ನಡೆಸಿದ ವೈದ್ಯರು, ಅತ್ಯಾಚಾರವಾಗಿರುವುದಾಗಿ ತಿಳಿಸಿದ್ದರು. ನಂತರವೇ ಪೋಷಕರು ಠಾಣೆಗೆ ಬಂದು ದೂರು ನೀಡಿದ್ದಾರೆ. ಬಾಲಕಿ ಸಹ ಅತ್ಯಾಚಾರದ ಬಗ್ಗೆ ಹೇಳಿಕೆ ನೀಡಿದ್ದಾಳೆ’ ಎಂದು ಪೊಲೀಸರು ಹೇಳಿದರು.
ಪೋಷಕರು ನೀಡಿರುವ ದೂರು ಆಧರಿಸಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.
ಪ್ರಕರಣ ದಾಖಲಾಗುತ್ತಿದ್ದಂತೆ ಪ್ರಾಂಶುಪಾಲನನ್ನು ಬಂಧಿಸಲಾಗಿದೆ. ಈತನನ್ನು ಕಸ್ಟಡಿಗೆ ಪಡೆದು ಮತ್ತಷ್ಟು ವಿಚಾರಣೆ ನಡೆಸಲಾಗುವುದು’ ಎಂದು ತಿಳಿಸಿದರು.
You must be logged in to post a comment Login